ಟೀಮ್ ಇಂಡಿಯಾ ಕ್ರಿಕೆಟಿಗ ಭುವನೇಶ್ವರ್ ಕುಮಾರ್ ದಂಪತಿಗೆ ಹೆಣ್ಣು ಮಗು

bhuvi web
Published on

ಲಖನೌ: ಟೀಮ್ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಅವರ ಪತ್ನಿ ನೂಪುರ್ ನಗರ್ ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 2017ರ ನವೆಂಬರ್ 23ರಂದು ಭುವನೇಶ್ವರ್-ನೂಪುರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

4ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದ ಮರುದಿನವೇ ಅವರ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಿದೆ. ಭುವಿ ಇತ್ತೀಚೆಗೆ ಕಿವೀಸ್ ವಿರುದ್ಧ ಟಿ20 ಸರಣಿಯಲ್ಲಿ ಆಡಿದ್ದರು. 31 ವರ್ಷದ ಭುವನೇಶ್ವರ್ ಕಳೆದ ಮೇನಲ್ಲಿ ಕ್ಯಾನ್ಸರ್‌ನಿಂದ ತಂದೆಯನ್ನು ಕಳೆದುಕೊಂಡಿದ್ದರು. ಆ ಬಳಿಕ ಐಪಿಎಲ್ 2ನೇ ಭಾಗ ಮತ್ತು ಟಿ20 ವಿಶ್ವಕಪ್‌ಗಳಲ್ಲಿ ಆಡಿದ್ದರು.

ಭುವನೇಶ್ವರ್ ಕುಮಾರ್ ಈಗ ಟೀಮ್ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ರೋಹಿತ್ ಶರ್ಮ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಸುರೇಶ್ ರೈನಾ, ಗೌತಮ್ ಗಂಭೀರ್, ಟಿ. ನಟರಾಜನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಉಮೇಶ್ ಯಾದವ್ ಸಾಲಿಗೆ ಸೇರಿದ್ದಾರೆ. ಅಂದರೆ ಹೆಣ್ಣು ಮಕ್ಕಳ ತಂದೆಯಾದ ಭಾಗ್ಯವಂತರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net