More

  ಸ್ವಾತಿ ಮಲಿವಾಲ್ ಪ್ರಕರಣ: ಆರೋಪಿ ಬಿಭವ್ ಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

  ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಮತ್ತು ಅನುಚಿತವಾಗಿ ವರ್ತಿಸಿದ ಪ್ರಕರಣದ ಆರೋಪಿ ಬಿಭವ್ ಕುಮಾರ್ ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

  ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾದ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರಿ ದೆಹಲಿ ಪೊಲೀಸರು ಮಾಡಿದ ಮನವಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಅಂಗೀಕರಿಸಿ ಆದೇಶ ನೀಡಿದ್ದಾರೆ.

  ಇದನ್ನು ಓದಿhttps://www.vijayavani.net/anil-kapoor-to-host-bigg-boss-ott-season-3

  ತನ್ನ ಬಂಧನವನ್ನು ಪ್ರಶ್ನಿಸಿ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಇದಕ್ಕೂ ಮುನ್ನ ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ಸೋಮವಾರ (ಮೇ 27)ರಂದು ವಜಾಗೊಳಿಸಿತ್ತು.

  ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಮೇ 18 ರಂದು ಬಂಧಿಸಿದ್ದರು. ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಕುಮಾರ್ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದರು.

  ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ, ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ!

  See also  ಅಡ್ವಾಣಿ ಸೇರಿ ಐವರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts