More

    ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಮಗುಚಿ ಬಿದ್ದು ಸೈಕಲ್ ಸವಾರ ಸ್ಥಳದಲ್ಲೇ ಸಾವು

    ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಸೈಕಲ್ ಸವಾರನ ಮೇಲೆ ಮಗುಚಿ ಬಿದ್ದು ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.‌ ಈ ಅವಘಡದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಗದ್ಯಾಳ ಗ್ರಾಮದಲ್ಲಿ ಇಂದು ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ, ಜಮಖಂಡಿ ತಾಲೂಕಿನ ವಿಠಲ ಮಾಳಿ (45) ಸಾವಿಗೀಡಾಗಿದ್ದಾರೆ.

    ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಿಲುಗಡೆ ಮಾಡಿದ್ದ ಸಂದರ್ಭದಲ್ಲಿ ಅದನ್ನು ನ್ಯೂಟ್ರಲ್ ಗೇರ್‌ನಲ್ಲಿ ಇರಿಸಲಾಗಿತ್ತು. ಹೀಗಾಗಿ ಇದ್ದಕ್ಕಿದ್ದಂತೆ ಚಲಿಸಿದ ಟ್ರ್ಯಾಕ್ಟರ್ ಮಗುಚಿ ಬಿದ್ದು, ಒಬ್ಬನ ಸಾವು ಸಂಭವಿಸಿದೆ.

    ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ ಲಾರಿ; ಹೆದ್ದಾರಿ ತುಂಬಾ ದೊಡ್ಡ ದೊಡ್ಡ ಶಿಲೆಗಲ್ಲುಗಳು, ಸಂಚಾರ ಅಸ್ತವ್ಯಸ್ತ..

    ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿ, ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.

    600 ಮೆಟ್ಟಿಲು ಹತ್ತಿ ದೇವಿಯ ಹರಕೆ ತೀರಿಸಿದ ಭಕ್ತ, ಕೆಲವೇ ನಿಮಿಷಗಳಲ್ಲಿ ಮರಳಿ ಬಾರದ ಲೋಕಕ್ಕೆ ತೆರಳಿದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts