Bidar | ಬೀದರ್​ನಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

police
Published on

ಬೀದರ್: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಅಘಾತಕಾರಿ ಘಟನೆ ಬೀದರ್​ನಲ್ಲಿ ಬುಧವಾರ ನಡೆದಿದೆ.

ನಗರದ ನ್ಯೂಟೌನ್ ಪೊಲೀಸ್ ಠಾಣೆಯ ಕರ್ತವ್ಯ ನಿರತ ಪೊಲೀಸ್​ ಕಾನ್ಸೆಟೇಬಲ್ ಹೃದಯಘಾತದಿಂದ ಮೃತಪಟ್ಟಿದ್ದಾನೆ.

ರಾಯಚೂರು ತಾಲೂಕಿನ ತಲಮಾರಿ ನಿವಾಸಿ ಚಂದ್ರಶೇಖರ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಇವರಿಗೆ 28 ವರ್ಷ ವಯಸ್ಸಾಗಿತ್ತು. ಇವರು ಕಳೆದ 6 ವರ್ಷಗಳಿಂದ ಬೀದರ್‌ನಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಗಾಂಧಿ ಜಯಂತಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಸಂದರ್ಭ ಪೇದೆಗೆ ಹೃದಯಾಘಾತವಾಗಿದ್ದು, ಕೂಡಲೇ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್ ಪೇದೆ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿಯುತ್ತಲೇ ಎಸ್ಪಿ ಪ್ರದೀಪ್ ಗುಂಟಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಮೂಲತಃ ರಾಯಚೂರು ತಾಲೂಕಿನ ತಲಮಾರಿ ನಿವಾಸಿದ ಚಂದ್ರಶೇಖರ 2018ರಲ್ಲಿ ಪೇದೆಯಾಗಿ ನೇಮಕಗೊಂಡಿದ್ದರು. ಕಳೆದ 6 ವರ್ಷದಿಂದ ಜಿಲ್ಲೆಯ ವಿವಿಧ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪೇದೆಗೆ ತಂದೆ, ತಾಯಿ, ಪತ್ನಿ ಹಾಗೂ ಎರಡು ವರ್ಷದ ಪುತ್ರ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net