28.5 C
Bengaluru
Monday, January 20, 2020

ಡಿಸಿಸಿ ಬ್ಯಾಂಕ್ನಿಂದ ರೈತರಿಗೆ ಆರ್ಥಿ ಕ ಶಕ್ತಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

 ಬೀದರ್: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ನಿಂದ 10 ಹೊಸ ಶಾಖೆ ಆರಂಭಿಸಲು ನಿರ್ಧರಿಸಿದ್ದು, ಈ ಸಂಬಂಧ ಆರ್ಬಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ಜಿಲ್ಲೆಯಲ್ಲಿ ಸದ್ಯ ಬ್ಯಾಂಕಿನ 45 ಶಾಖೆಗಳಿವೆ. ಬಸವಕಲ್ಯಾಣದ ತ್ರಿಪುರಾಂತ, ಭಾಲ್ಕಿ ಪಟ್ಟಣ, ಮಹಾತ್ಮಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಆವರಣ ಸೇರಿ ವಿವಿಧೆಡೆ 10 ಹೊಸ ಶಾಖೆ ಆರಂಭಕ್ಕೆ ಅನುಮತಿ ಕೋರಿ ಆರ್ಬಿಐಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮಂಜೂರಾತಿ ದೊರಕುತ್ತಲೇ ಕಾರ್ಯಾರಂಭಿಸಲಿವೆ.

ಜನರಿಗೆ, ರೈತರಿಗೆ ಇನ್ನಷ್ಟು ಸೇವೆ ಒದಗಿಸುವ ದೃಷ್ಟಿಯಿಂದ ಹೊಸ ಶಾಖೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸದ್ಯಕ್ಕಿರುವ 45 ಶಾಖೆಗಳ ಪೈಕಿ 25 ಸ್ವಂತ ಕಟ್ಟಡ ಹೊಂದಿವೆ. ಉಳಿದ ಶಾಖೆಗಳಿಗೂ ಸ್ವಂತ ಕಟ್ಟಡ ಕಲ್ಪಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯಲ್ಲಿ 171 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್)ಗಳಿವೆ. ಗ್ರಾಪಂಗೆ ಒಂದು ಪಿಕೆಪಿಎಸ್ ಇರಬೇಕೆಂಬ ನಿಯಮದಂತೆ ಜಿಲ್ಲೆಯಲ್ಲಿ ಹೊಸದಾಗಿ ಮರಖಲ್, ಉಡಮನಳ್ಳಿ, ಸಿಂಧನಕೇರಾ ಹಾಗೂ ಕೋಡಂಬಲ್ಗಳಲ್ಲಿ ಹೊಸದಾಗಿ ಸಂಘ ಆರಂಭಿಸಲಾಗಿದೆ. ಜಿಲ್ಲೆ ರೈತರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಬ್ಯಾಂಕ್ ಮಾಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಎಲ್ಲ ಸೇವಾ ಸೌಲಭ್ಯ ಒದಗಿಸುತ್ತಿದೆ. ಬ್ಯಾಂಕ್ ಸೇವೆ ಜತೆಗೆ ನಿರುದ್ಯೋಗಿಗಳಿಗೆ ರುಡ್ಸೆಟ್ ತರಬೇತಿ ಕೇಂದ್ರ, ಸಹಾರ್ದ ತರಬೇತಿ ಸಂಸ್ಥೆ ಮಂತಾದ ಚಟುವಟಿಕೆ ಮುಖಾಂತರ ಬ್ಯಾಂಕ್ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಬ್ಯಾಂಕ್ ಆರ್ಥಿಕ ಸ್ಥಿತಿ ಕ್ರಮೇಣ ಸದೃಢವಾಗುತ್ತಿದೆ. ದಿ.ಗುರುಪಾದಪ್ಪ ನಾಗಮಾರಪಳ್ಳಿ 1985ರಲ್ಲಿ ಅಧ್ಯಕ್ಷತೆ ವಹಿಸಿಕೊಂಡ ಬಳಿಕ ಪ್ರತಿವರ್ಷ ಅಗಾಧ ಸಾಧನೆ ಮಾಡಿದೆ. ಸದ್ಯ ಬ್ಯಾಂಕ್ ವಹಿವಾಟು 2697 ಕೋಟಿಗೇರಿದೆ. 1459 ಕೋಟಿ ರೂ. ಠೇವಣಿ, 105 ಕೋಟಿ ರೂ. ಷೇರು ಬಂಡವಾಳ, 267 ಕೋಟಿ ರೂ. ಕಾಯ್ದಿಟ್ಟ ನಿಧಿ, 373 ಕೋಟಿ ರೂ. ಸ್ವಂತ ಬಂಡವಾಳ ಹೊಂದಿದೆ. 1953 ಕೋಟಿ ರೂ. ಸಾಲ ವಿತರಿಸಲಾಗಿದೆ. ಇದರಲ್ಲಿ 1000 ಕೋಟಿ ರೂ. ಕೃಷಿ ಸಾಲವಿದೆ. ಜಿಲ್ಲೆಯಲ್ಲಿ 2.87 ಲಕ್ಷ ರೈತ ಕುಟುಂಬಗಳಿದ್ದು, ಈ ಪೈಕಿ 2.14 ಲಕ್ಷ ರೈತ ಕುಟುಂಬಗಳು ಬ್ಯಾಂಕ್ ಹಾಗೂ ಅಧೀನದ ಪಿಕೆಪಿಎಸ್ ಮೂಲಕ ನೋಂದಣಿ ಮಾಡಿಕೊಂಡಿವೆ ಎಂದು ವಿವರಿಸಿದರು.

1922ರಲ್ಲಿ ಸ್ಥಾಪನೆಗೊಂಡ ಬ್ಯಾಂಕ್ 2022ರಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಲಾಗುತ್ತಿದೆ. ಈ ನಿಮಿತ್ತ ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡಲು ಯೋಜನೆ ಹಾಕಲಾಗಿದೆ. ಇ-ಲಾಂಜ್, ಮೊಬೈಲ್ ಬ್ಯಾಂಕಿಂಗ್ ಇತರ ಯೋಜನೆ ಜಾರಿಗೆ ತರಲಾಗುತ್ತಿದೆ. ಬ್ಯಾಂಕ್ನ ಮರಳಿ ಬಾರದ ಸಾಲದ (ಎನ್ಪಿಎ) ಪ್ರಮಾಣ ಶೇ.8 ಇದೆ. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಸಾಲ ಹಾಗೂ ಬಡ್ಡಿ ವಸೂಲಾಗದ ಕಾರಣಕ್ಕೆ ಈ ಪ್ರಮಾಣ ಹೆಚ್ಚಿದೆ. ಎನ್ಪಿಎ ಹೆಚ್ಚಳದ ಬಗ್ಗೆ ನಾವು ಗಂಭೀರವಾಗಿದ್ದು, ತಗ್ಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ನಿರ್ದೇಶಕರಾದ ವಿಜಯಕುಮಾರ ಪಾಟೀಲ್ ಗಾದಗಿ, ಮಹ್ಮದ್ ಸಲಿಮುದ್ದೀನ್, ಪರಮೇಶ್ವರ ಮುಗಟೆ, ಜಿಎಂ ಚಂದ್ರಶೇಖರ ಹತ್ತಿ, ಸಿಇಒ ಮಲ್ಲಿಕಾಜರ್ುನ ಮಹಾಜನ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...