Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಡಾ.ರುಮ್ಮಾಗೆ ಭಾಷಾ ಬೋಧಕ ಪ್ರಶಸ್ತಿ

Sunday, 16.09.2018, 11:08 PM       No Comments

ಬೀದರ್: ಪ್ರಸಕ್ತ ಸಾಲಿನ ರಾಜ್ಯಮಟ್ಟದ 4ನೇ ವಿ.ಎಸ್. ಮಠ್ ಭಾಷಾ ಬೋಧಕ ಪ್ರಶಸ್ತಿಯನ್ನು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿವಿಯ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ಶಿವಗಂಗಾ ರುಮ್ಮಾ ಅವರಿಗೆ ಪ್ರದಾನ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ರೋಟರಿ ಕ್ಲಬ್ ವತಿಯಿಂದ ನಗರದ ರಂಗಮಂದಿರದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ಭಾಷಾ ಬೋಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಾ.ರುಮ್ಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ರುಮ್ಮಾ ಅವರಿಗೆ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ, ಮಳಚಾಪುರದ ಸಕರ್ಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕರಾಗಿದ್ದ ದಿ.ವಿ.ಎಸ್. ಮಠ್ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಚನ್ನಬಸವ ಹೇಡೆ ಅವರ ದತ್ತಿ ನಿಧಿಯಿಂದ ಕಳೆದ 2015ನೇ ಸಾಲಿನಿಂದ ಉತ್ಕ್ರಷ್ಠ, ಸೃಜನಶೀಲ ಕನ್ನಡ ಭಾಷಾ ಬೋಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಖ್ಯಾತ ಕವಿ, ಭಾಷಾ ಬೋಧಕ ವಾಸುದೇವ ನಾಡಿಗ್ (2015), ಯುವ ಸಾಹಿತಿ, ಕಲಬುರಗಿಯ ಕೇಂದ್ರೀಯ ವಿವಿ ಪ್ರಾಧ್ಯಾಪಕ ಡಾ.ವಿಕ್ರಮ ವಿಸಾಜಿ (2016), ಸಾಹಿತಿ ನೀಲಾವರ ಸುರೇಂದ್ರ ಅಡಿಗ್ (2017) ಅವರಿಗೆ ಈ ಹಿಂದೆ ನೀಡಲಾಗಿದೆ.

ಕಾರ್ಯಕ್ರಮ ಉದ್ಘಾಟಿಸಿದ ಲೋಕಸಭೆ ಸದಸ್ಯ ಭಗವಂತ ಖೂಬಾ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳಿಂದ ವಿದ್ಯಾಥರ್ಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ವೃದ್ಧಿಯಾಗಲಿದೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಮೂಲಕ ಇತರೆ ವಿದ್ಯಾಥರ್ಿಗಳಿಗೆ ಪ್ರೇರಣೆ ನೀಡುವ ಕಾರ್ಯಕ್ರಮಗಳು ಮೇಲಿಂದ ಮೇಲೆ ನಡೆಯಬೇಕು ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಗದಗಿನ ಪ್ರೊ. ಸಿದ್ದು ಯಾಪಲಪರವಿ, ರಾಜಕಾರಣಿಗಳು ಹಾಗೂ ಸಾಹಿತಿಗಳ ನಡುವೆ ಅನಾಭಾವ ಸಂಬಂಧ ಇರಬೇಕು. ರಾಜಪ್ರಭುತ್ವದಲ್ಲಿದ್ದ ಬಸವಣ್ಣ ಅದನ್ನು ಸಮರ್ಥವಾಗಿ ಬಳಸಿಕೊಳ್ಳದಿದ್ದರೆ ವಚನ ಸಾಹಿತ್ಯದಂಥ ಸಾಹಿತ್ಯ ನಮಗೆ ದೊರಕುತ್ತಿರಲಿಲ್ಲ ಎಂದು ಹೇಳಿದರು.
ಎಂಎಲ್ಸಿ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, ನಗರದಲ್ಲಿ ನಿಮರ್ಿಸಲು ಉದ್ದೇಶಿಸಿರುವ ಕನ್ನಡ ಭವನಕ್ಕೆ ತಮ್ಮ ವಿಧಾನ ಪರಿಷತ್ ನಿಧಿಯಿಂದ 10 ಲಕ್ಷ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ಅಬ್ದುಲ್ ಖದೀರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂಣರ್ಿಮಾ ಜಿ., ರೋಟರಿ ಕ್ಲಬ್ನ ಚಂದ್ರಸೇನನ್, ಕಸಾಪ ಕಾರ್ಯದಶರ್ಿ ಡಾ. ಬಸವರಾಜ ಬಲ್ಲೂರ್ ಮಾತನಾಡಿದರು.

ಹುಲಸೂರಿನ ಶ್ರೀ ಡಾ. ಶಿವಾನಂದ ಮಹಾಸ್ವಾಮಿ, ರೋಟರಿ ಕ್ಲಬ್ ಅಧ್ಯಕ್ಷ ನಾಗೇಂದ್ರ ನಿಟ್ಟೂರೆ, ಪ್ರಮುಖರಾದ ಬಸವರಾಜ ಧನ್ನೂರ, ರವೀಂದ್ರ ರೆಡ್ಡಿ, ಪಾಂಡುರಂಗ ಬೆಲ್ದಾರ್ ಇತರರಿದ್ದರು. ಚನ್ನಬಸವ ಹೇಡೆ ಸ್ವಾಗತಿದರು. ಶಿವಶಂಕರ ಟೋಕರೆ ನಿರೂಪಿಸಿದರು. ಕಸ್ತೂರಿ ಎಸ್. ಪಟಪಳ್ಳಿ ವಂದಿಸಿದರು.

Leave a Reply

Your email address will not be published. Required fields are marked *

Back To Top