ಬಾಲ್ಯ ವಿವಾಹಕ್ಕೆ ವರದಕ್ಷಿಣೆ ಕಾರಣ

ವಿಜಯವಾಣಿ ಸುದ್ದಿಜಾಲ ಬೀದರ್
ಮನುಕುಲಕ್ಕೆ ಕ್ಯಾನ್ಸರ್ನಂತೆ ಭಾದಿಸುತ್ತಿರುವ ವರದಕ್ಷಿಣೆ ಪಿಡುಗಿನಿಂದ ದೂರು ಇರುವುದಕೋಸ್ಕರ ಪಾಲಕರು ತಮ್ಮ ಮಕ್ಕಳನ್ನು ಬಾಲ್ಯ ವಿವಾಹಕ್ಕೆ ದೂಡುವುದು ಕಂಡು ಬರುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಪ್ರೇಮಾವತಿ ಮನಗೂಳಿ ಕಳವಳ ವ್ಯಕ್ತಪಡಿಸಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗಾಗಿ ಭಾನುವಾರ ನಡೆದ ಒಂದು ದಿನದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯವನ್ನು ಚೆಂದದಿಂದ ಕಳೆಯಬೇಕಾದ ವಯಸ್ಸಿನಲ್ಲಿ ಮಕ್ಕಳು ಸಂಸಾರದ ಜವಾಬ್ದಾರಿ ಹೊರಿಸುವುದು ವಿಷಾದದ ಸಂಗತಿ ಎಂದರು.

ಬಾಲ್ಯ ವಿವಾಹವು ಅಮಾನವೀಯ ಪದ್ಧತಿಯಾಗಿದ್ದು, ಇದು ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತದೆ. ಬಾಲ್ಯ ವಿವಾಹ ಮಾಡುವುದು ಅಪರಾಧವಾಗಿದೆ ಎಂದು ಹೇಳಿದರು.

ಜಿಪಂ ಸಿಇಒ ಮಹಾಂತೇಶ ಬೀಳಗಿ ಮಾತನಾಡಿ, ಬಾಲ್ಯ ವಿವಾಹ ಮಾಡುವುದು ತಪ್ಪು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ನಿತ್ಯ ನಿರಂತರ ನಡೆಯಬೇಕು. ಈ ವಿಷಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಇದ್ದು ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ ರೆಡ್ಡಿ ಮಾತನಾಡಿದರು. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಕನುಮಯ್ಯ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಇತರರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಕಾರ್ಯಕ್ರಮ ಸಂಘಟಿಸಲಾಗಿತ್ತು.

Leave a Reply

Your email address will not be published. Required fields are marked *