More

    ಬೃಹತ್ ರಕ್ತದಾನ ಶಿಬಿರ ಏ. 7ಕ್ಕೆ

    ಚಿಕ್ಕಮಗಳೂರು: ಶೃಂಗೇರಿಯ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಅವರು ಸನ್ಯಾಸ ಸ್ವೀಕಾರದ 50 ನೇ ವರ್ಷಾಚರಣೆ ಹಾಗೂ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ನಗರದ ಶೃಂಗೇರಿ ಶ್ರೀ ಶಂಕರಮಠದ ವಿದ್ಯಾಭಾರತಿ ಸಭಾಂಗಣದಲ್ಲಿ ಏ. 7ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಪ್ರದೀಪ್ ಗೌಡ ತಿಳಿಸಿದರು.

    ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಹಳ್ಳಿಯಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ರಕ್ತದಾನ ಶಿಬಿರ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
    ಏ. 7ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನ ಮಾಡುವ ದಾನಿಗಳಿಗೆ ಅಭಿನಂದನಾ ಪತ್ರವನ್ನು ವಿತರಣೆ ಮಾಡಲಾಗುವುದು. ಇನ್ನು ರಕ್ತದಾನಿಗಳಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಶೃಂಗೇರಿ ಶ್ರೀ ಶಂಕರ ಮಠದಿಂದ ಕಲ್ಪಿಸಲಾಗಿದೆ ಎಂದು ಹೇಳಿದರು.
    ಜಿಲ್ಲೆಯ ಹಲವಾರು ಶಾಲಾ ಕಾಲೇಜುಗಳಲ್ಲಿ ಭಾರತೀಯ ರೆಟ್ರಾಕ್ ಸಂಸ್ಥೆಯ ಸಂಘ ಸಂಸ್ಥೆಗಳಾದ ಯುವ ರೆಡ್ ಕ್ರಾಸ್ ಸಂಸ್ಥೆ ಮತ್ತು ಕಿರಿಯರ ರೆಡ್ ಕ್ರಾಸ್ ಸಂಸ್ಥೆಗಳಿಗೆ ನಿಗದಿತ ಶುಲ್ಕವನ್ನು ಬರೆಸಿಕೊಳ್ಳಲಾಗಿದೆ ಆದರೆ ಹೀಗೆ ಬರೆಸಿಕೊಂಡ ಶುಲ್ಕವನ್ನು ಜಿಲ್ಲಾ ಮತ್ತು ರಾಜ್ಯ ಸಂಸ್ಥೆಯ ಖಾತೆಗೆ ಜಮಾ ಮಾಡಿಲ್ಲ. ಹೀಗಾಗಿ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಪ್ರತಿಯೊಂದು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶುಲ್ಕ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಮುಂದಿನ ದಿನಗಳಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಆತ್ಮ ರಕ್ಷಣೆಯ ಕುರಿತು ಮಾಹಿತಿ ನೀಡಿ ಅವರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ರೂಪಿಸಲಾಗುವುದು. ರಕ್ತದಾನ ಅಂಗಾಂಗ ದಾನ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಮಾನ್ಯ ಜನರನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ರಸೂಲ್, ವಿಲಿಯಂ ಪೆರೇರಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts