More

    ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಮಹತ್ವದ ತೀರ್ಪು; ಅಪರಾಧಿಗಳ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂ

    ಗುಜರಾತ್: ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಗುಜರಾತ್ ಗಲಭೆ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಲ್ಕಿಸ್ ಬಾನೊ ಗ್ಯಾಂಗ್‌ರೇಪ್ ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಎಲ್ಲಾ 11 ಅಪರಾಧಿಗಳನ್ನು ಆಗಸ್ಟ್ 2022 ರಲ್ಲಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

    ಸೋಮವಾರ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರಿದ್ದ ವಿಶೇಷ ಪೀಠ ಈ ತೀರ್ಪು ನೀಡಿದೆ. ಆಗಸ್ಟ್ 15, 2022 ರಂದು ರಾಜ್ಯದ ವಿನಾಯಿತಿ ನೀತಿಯಡಿಯಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ಕ್ರಮದ ಕಾನೂನುಬದ್ಧತೆಯ ಪ್ರಶ್ನೆಗೆ ಎಲ್ಲಾ ಕಕ್ಷಿದಾರರನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ತೀರ್ಪು ನೀಡಿದೆ.

    ಮೇ 13, 2022 ರ ತೀರ್ಪು (ಅಪರಾಧಿಗೆ ಕ್ಷಮಾದಾನ ನೀಡುವುದನ್ನು ಪರಿಗಣಿಸುವಂತೆ ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು) ನ್ಯಾಯಾಲಯವನ್ನು ವಂಚಿಸುವ ಮೂಲಕ ಮತ್ತು ವಸ್ತು ಸಂಗತಿಗಳನ್ನು ತಪ್ಪಾಗಿ ನಿರೂಪಿಸುವ ಮೂಲಕ ಉಲ್ಲಂಘಿಸಲಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

    ಜನವರಿ 21, 2008 ರಂದು, ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಏಳು ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ ಎಲ್ಲಾ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಈ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು, ಆಗ ಆಕೆಗೆ 21 ವರ್ಷ ವಯಸ್ಸಾಗಿತ್ತು ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದರು ಎಂಬುದು ಗಮನಾರ್ಹ. ಹತ್ಯೆಗೀಡಾದ ಏಳು ಕುಟುಂಬ ಸದಸ್ಯರಲ್ಲಿ ಅವರ ಮೂರು ವರ್ಷದ ಮಗಳೂ ಸೇರಿದ್ದಳು. 

    ಮಾಲ್ಡೀವ್ಸ್‌ ಮೇಲೆ ಭುಗಿಲೆದ್ದ ಜನರ ಕೋಪ; ಭಾನುವಾರ ದಿನವಿಡೀ ಟ್ರೆಂಡಿಂಗ್ ಆದ #BoycottMaldives

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts