ಬೆಂಗಳೂರು: ನಿಗೂಢ ವಸ್ತು ಒಂದು ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಕೆಫೆ ಹಾಳಾಗಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಹಾಗೂ ನಾಲ್ವರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ಮೂಲಗಳ ಪ್ರಕಾರ ವ್ಯಕ್ತಿ ಒಬ್ಬರ ಬ್ಯಾಗ್‌ನಲ್ಲಿದ್ದ ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ದುರಂತ ಸಂಭವಿಸಿದೆ. ಸ್ಫೋಟದ ಶಬ್ದ ಕೇಳುತ್ತಿದ್ದಂತೆ ಭಯಭೀತರಾಗಿ ದಿಕ್ಕಾಪಾಲಾಗಿ ಓಡಲು ಶುರು ಮಾಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.