More

    ಸೇಡಂನಲ್ಲಿ ಬೃಹತ್ ಉದ್ಯೋಗ ಮೇಳ 13ರಂದು

    ಸೇಡಂ: ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಅ.13ರಂದು ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, 76ಕ್ಕೂ ಅಧಿಕ ಕಂಪನಿಗಳು ಭಾಗಿಯಾಗಲಿವೆ. ಬರೋಬ್ಬರಿ 19 ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.

    ಮೇಳದಲ್ಲಿ 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಕ್ರೀಡಾಂಗಣದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಹೊಸ ಮಿನಿ ವಿಧಾನಸೌಧ ಕಟ್ಟಡ ಮತ್ತು ಸರ್ಕಾರಿ ಕನ್ಯಾ ಪ್ರೌಢಶಾಲೆ ಆವರಣದಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ. ಎಲ್ಲರಿಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಸ್ಟಾಲ್ ಹಾಗೂ ಇಲಾಖೆ ಮಾಹಿತಿ ನೀಡುವ ಕೌಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಈಗಾಗಲೇ ಆನ್‌ಲೈನ್ ನೋಂದಣಿ ಆರಂಭಿಸಿದ್ದು, 2,515ಕ್ಕೂ ಅಧಿಕ ಜನರು ಹೆಸರು ನೋಂದಾಯಿಸಿದ್ದಾರೆ. ಮಂಗಳವಾರ ಮತ್ತು ಬುಧವಾರ ಕೌಶಲಾಭಿವೃದ್ಧಿ ಇಲಾಖೆಯಿಂದ ಸಂದರ್ಶನದ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಕ್ಷೇತ್ರದಲ್ಲಿ ಸರ್ಕಾರದಿಂದ ಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳ ನಡೆಸಲಾಗುತ್ತಿದೆ ಎಂದರು.

    ಕೌಶಲಾಭಿವೃದ್ದಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ಗೌಡ ಮಾತನಾಡಿ, ಮೇಳದ ಯಶಸ್ಸಿಗಾಗಿ ವ್ಯಾಪಕ ಸಿದ್ಧತೆ ನಡೆದಿದೆ. ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ, ಕಂದಾಯ ಸಿಬ್ಬಂದಿ ಮೂಲಕ ಪ್ರಚಾರ ಮಾಡಲಾಗುಗುತ್ತಿದೆ. ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದು. ಮೇಳದ ಸ್ಥಳದಲ್ಲೂ ನೋಂದಣಿಗೆ ಅವಕಾಶವಿದೆ. ಮಾಹಿತಿಗಾಗಿ ಮೊ.96064 92216, 89041 22167ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

    ಕೌಶಲಾಭಿವೃದ್ಧಿ ಜಿಲ್ಲಾ ಅಧಿಕಾರಿ ಮುರಳೀಧರ, ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ತಹಸೀಲ್ದಾರ್ ಶ್ರೀಯಾಂಕ ಧನಶ್ರೀ, ಡಿವೈಎಸ್‌ಪಿ ಕೆ.ಬಸವರಾಜ, ಸಿಪಿಐ ಸಂದೀಪಸಿAಗ್ ಮುರಗೋಡ, ಪಿಎಸ್‌ಐ ಮಂಜುನಾಥರೆಡ್ಡಿ, ತಾಪಂ ಇಒ ಚನ್ನಪ್ಪ ರಾಯಣ್ಣನವರ್, ಪುರಸಭೆ ಮುಖ್ಯಾಧಿಕಾರಿ ಪ್ರಹ್ಲಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ಪ್ರಮುಖರಾದ ಬಸವರಾಜ ಪಾಟೀಲ್ ಊಡಗಿ, ವಿಶ್ವನಾಥ ಪಾಟೀಲ್ ಬೊಮ್ನಳ್ಳಿ, ಸಂತೋಷ ಕುಲಕರ್ಣಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts