

ಬೆಂಗಳೂರು: ಕಿರುತೆರೆ ನಟಿ ಮೇಲಿನ ಅತ್ಯಾಚಾರ ಆರೋಪದ ಮೇಲೆ ನಟ ಮಡೆನೂರು ಮನು ಜೈಲು ಪಾಲಾಗಿ ಬೇಲ್ ಮೂಲಕ ಹೊರಬಂದಿದ್ದಾರೆ. ಇದೀಗ ಅತ್ಯಾಚಾರ ಅರೋಪ ಪ್ರಕರಣದಲ್ಲಿ ನಟ ಮಡೆನೂರು ಮನುಗೆ ಬಿಗ್ ರಿಲೀಫ್ ಸಕ್ಕಂತಾಗಿದೆ. ಸಂತ್ರಸ್ತೆ ಮಾತುಕತೆ ಮೂಲಕ ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದು, ಮನು ವಿರುದ್ಧ ಹಾಕಿದ್ದ ಕೇಸ್ನ್ನು ವಾಪಸ್ ತೆಗೆದುಕೊಂಡಿದ್ದಾರೆ.
ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಸಂತ್ರಸ್ತೆ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ಮಡೆನೂರು ಮನುರನ್ನು ಬಂಧನ ಮಾಡಿದ್ದರು. ಹಾಸನದ ಶಾಂತಿಗ್ರಾಮದ ಬಳಿ ಮಡೆನೂರು ಮನುರನ್ನ ಪೊಲೀಸರು ಅರೆಸ್ಟ್ ಮಾಡಿದ್ದರು. ಆರೋಪಿಯನ್ನ ಬಂಧಿಸಿದ ಬಳಿಕ ಪೊಲೀಸರು ವಿಚಾರಣೆ ನಡೆಸಿ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಂತರ ಮಡೆನೂರು ಮನು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡಿದ್ದರು.
(ಏಜೆನ್ಸೀಸ್)