More

    ಆರ್​ಸಿಬಿಗೆ ಬಿಗ್​ಶಾಕ್​! ಮಿಲಿಯನ್​ ಡಾಲರ್​ ಪ್ರಶ್ನೆಯಾದ ಕೊಹ್ಲಿ, ಏನಿದು ಬ್ರೋ ಎಂದ ಅಭಿಮಾನಿಗಳು

    ನವದೆಹಲಿ: ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟ್ಸ್​ಮನ್​​ ವಿರಾಟ್​ ಕೊಹ್ಲಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರ ಮನೆಗೆ ಜ್ಯೂನಿಯರ್​ ವಿರಾಟ್​ ಕೊಹ್ಲಿ ಆಗಮನವಾಗಿದ್ದು, ಕೊಹ್ಲಿ ತುಂಬಾ ಖುಷಿಯಾಗಿದ್ದಾರೆ. ಮಗನೊಂದಿಗೆ ಸಮಯ ಕಳೆಯುತ್ತಿದ್ದು, ಟೀಮ್​ ಇಂಡಿಯಾದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಕೊಹ್ಲಿ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಕೊಹ್ಲಿ ಈ ಬಾರಿ ಐಪಿಎಲ್​ ಆಡ್ತಾರಾ? ಸದ್ಯ ಆರ್​ಸಿಬಿ ಅಭಿಮಾನಿಗಳಲ್ಲಿ ಇದೊಂದು ಮಿಲಿಯನ್​ ಡಾಲರ್​ ಪ್ರಶ್ನೆಯಾಗಿದೆ. ಇತ್ತೀಚೆಗಷ್ಟೇ ಟೀಮ್​ ಇಂಡಿಯಾದ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಈ ವಿಚಾರವಾಗಿ ಶಾಕಿಂಗ್​ ಹೇಳಿಕೆ ನೀಡಿದ್ದು, ಐಪಿಎಲ್​ನಲ್ಲಿ ಕೊಹ್ಲಿ ಆಡುವುದು ಅನುಮಾನ ಎಂದಿದ್ದಾರೆ.

    ಐಪಿಎಲ್​ 2024 ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮಾರ್ಚ್ 22ರಿಂದ ಆರಂಭವಾಗಲಿರುವ ಈ ಮೆಗಾ ಟೂರ್ನಮೆಂಟ್‌ನ ಮೊದಲ ಪಂದ್ಯದಲ್ಲೇ ಆರ್‌ಸಿಬಿ ತಂಡ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಆದರೆ, ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಭಾಗವಹಿಸುತ್ತಾರಾ? ಎಲ್ಲರಲ್ಲೂ ಇರುವ ಸಂದೇಹವಿದು. ಟೀಮ್​ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಕುರಿತು ಬಾಂಬ್ ಸಿಡಿಸಿದ್ದಾರೆ. ವಿರುಷ್ಕಾ ದಂಪತಿಗೆ ಗಂಡು ಮಗು ಜನಿಸಿರುವುದು ನಿಮಗೆಲ್ಲ ಗೊತ್ತೇ ಇದೆ. ಇದರಿಂದಾಗಿ ಭಾರತ ತಂಡದಿಂದ ಕೊಹ್ಲಿ ಕೆಲಕಾಲದಿಂದ ದೂರ ಉಳಿದಿದ್ದಾರೆ. ಐಪಿಎಲ್​ ವಿಚಾರದಲ್ಲಿಯೂ ಇದು ಮುಂದುವರಿಯಲಿದೆ ಎನ್ನಲಾಗುತ್ತಿದೆ.

    ಸುನಿಲ್ ಗವಾಸ್ಕರ್ ಇತ್ತೀಚೆಗೆ ಮಾಧ್ಯಮವೊಂದರ ಜೊತೆ ಮಾತನಾಡಿದ್ದು, ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಸದ್ಯ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇದೇ ವೇಳೆ ಕೊಹ್ಲಿ ಐಪಿಎಲ್ ಆಡುತ್ತಾರಾ? ಎಂಬ ಪ್ರಶ್ನೆ ಎಲ್ಲರ ಮನದಲ್ಲಿದೆ. ಆದರೆ, ನನಗೆ ತಿಳಿದ ಮಟ್ಟಿಗೆ ವಿರಾಟ್ ಕೊಹ್ಲಿ ಈ ಐಪಿಎಲ್‌ನಲ್ಲಿ ಆಡದೇ ಇರಬಹುದು ಎಂದು ಶಾಕಿಂಗ್ ಕಾಮೆಂಟ್‌ಗಳನ್ನು ಮಾಡಿದ್ದಾರೆ.

    ಸದ್ಯ ಸುನಿಲ್​ ಗವಾಸ್ಕರ್​ ಅವರ ಈ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. ಆರ್‌ಸಿಬಿ ಅಭಿಮಾನಿಗಳು ಏನಿದು ಬ್ರೋ ಎಂದು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಈ ಸುದ್ದಿ ಕೇಳಿ ಆರ್‌ಸಿಬಿ ಅಭಿಮಾನಿಗಳು ಸೇರಿದಂತೆ ಕೊಹ್ಲಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸುನಿಲ್​ ಗವಾಸ್ಕರ್​ ಮಾತು ನಿಜವಾಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಆದರೆ, ವಿರಾಟ್ ಈ ಐಪಿಎಲ್‌ನಲ್ಲಿ ಆಡುತ್ತಾರೋ? ಇಲ್ಲವೋ? ಎಂಬುದನ್ನು ಕಾದು ನೋಡಬೇಕಿದೆ. (ಏಜೆನ್ಸೀಸ್​)

    ಬ್ಯೂಟಿಫುಲ್​​ ಪತ್ನಿಯನ್ನು ಈ ರೀತಿ ನೋಡಲು ಇಚ್ಛಿಸದ ಗಂಡ… ನಡದೇ ಹೋಯಿತು ಘನ ಘೋರ ದುರಂತ

    ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts