More

    ಮುಂಬೈ ವಿರುದ್ಧ ಹೈದರಾಬಾದ್​ಗೆ ಭರ್ಜರಿ ಜಯ!

    ಹೈದರಾಬಾದ್‌: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ತಂಡವನ್ನು 31 ರನ್​ಗಳಿಂದ ಮಣಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

    ಇದನ್ನೂ ಓದಿ: ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

    ಇತ್ತ ಹೈದರಾಬಾದ್‌ ವಿರುದ್ಧ ಗೆಲುವಿಗಾಗಿ ಹೋರಾಡಿ ವಿರೋಚಿತ ಸೋಲು ಕಂಡ ಮುಂಬೈ ಇಂಡಿಯನ್ಸ್‌ ಲೀಗ್​ನಲ್ಲಿ ಸತತ ಎರಡನೇ ಸೋಲು ಕಂಡಿತು.
    ಮೊದಲಿಗೆ ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 3 ವಿಕೆಟ್‌ ಕಳೆದುಕೊಂಡು 277 ರನ್ ಗಳಿಸಿ ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿತು. ಗೆಲ್ಲಲು 278 ರನ್‌ಗಳ ಕಠಿಣ ಗುರಿಯನ್ನು ಪಡೆದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 246 ರನ್‌ ಹೊಡೆದು ಸತತ ಎರಡನೇ ಸೋಲನ್ನು ಅನುಭವಿಸಿತು.

    ಈ ಹಿಂದೆ ಅತಿ ಹೆಚ್ಚು ರನ್‌ ಸಿಡಿಸಿದ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹೆಸರಿನಲ್ಲಿ ಇತ್ತು. 2013ರಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್‌ ವಿರುದ್ಧ 5 ವಿಕೆಟ್‌ ನಷ್ಟಕ್ಕೆ 263 ರನ್‌ ಹೊಡೆದಿತ್ತು. ಈ ಪಂದ್ಯದಲ್ಲಿ ಕ್ರಿಸ್‌ ಗೇಲ್‌ ಔಟಾಗದೇ 175 ರನ್‌ ಚಚ್ಚಿದ್ದರು.
    ಸನ್​ರೈಸರ್ಸ್​ ಇನ್ನಿಂಗ್ಸ್ ಹೀಗಿತ್ತು: ಇದಕ್ಕೂ ಮುನ್ನ ಟಾಸ್ ಮೊದಲು ಬ್ಯಾಟಿಂಗ್ ಮಾಡಿದ ಸನ್​ರೈರ್ಸ್​ಗೆ ಟ್ರಾವಿಸ್ ಹೆಡ್ ಭರ್ಜರಿ ಇನಿಂಗ್ಸ್​ ಆಡಿದರು. 24 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 62 ರನ್ ಗಳಿಸಿದರು. ಅಭಿಷೇಕ್ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 63 ರನ್ ಭಾರಿಸಿದರು.

    ಇಬ್ಬರೂ ಔಟಾದ ನಂತರ ಬಂದ ಹೆನ್ರಿಚ್ ಕ್ಲಾಸೆನ್ (34 ಎಸೆತಗಳಲ್ಲಿ ಔಟಾಗದೆ 80, ನಾಲ್ಕು ಬೌಂಡರಿ, 7 ಸಿಕ್ಸರ್) ಮತ್ತು ಏಡೆನ್ ಮಾರ್ಕ್ರಾಮ್ (28 ಎಸೆತಗಳಲ್ಲಿ 42, 2 ಬೌಂಡರಿ, ಒಂದು ಸಿಕ್ಸರ್) 55 ಎಸೆತಗಳಲ್ಲಿ 116 ರನ್‌ಗಳ ಮುರಿಯದ ಜೊತೆಯಾಟ ನೀಡಿ ತಂಡವನ್ನು 277 ರನ್​ಗಳ ದಾಖಲೆಯ ಮೊತ್ತಕ್ಕೆ ಕೊಂಡೊಯ್ದರು.

    ಭಾರೀ ದೊಡ್ಡ ಮೊತ್ತವಿದ್ದ ಹಿನ್ನೆಲೆಯಲ್ಲಿ ಆರಂಭದಲ್ಲೇ ರೋಹಿತ್‌ ಶರ್ಮಾ ಮತ್ತು ಇಶನ್‌ ಕಿಶನ್‌ ಅಬ್ಬರಿಸಲು ಆರಂಭಿಸಿದರು. ಇಬ್ಬರು 20 ಎಸೆತಗಳಲ್ಲಿ 56 ರನ್‌ ಗಳಿಸಿದರು.

    ಈಶನ್‌ ಕಿಶನ್‌ 34 ರನ್‌ ಹೊಡೆದು ಔಟಾದರೆ ರೋಹಿತ್‌ ಶರ್ಮಾ 26 ರನ್‌ ಹೊಡೆದು ಔಟಾದರು. ನಂತರ ನಮನ್‌ ಧೀರ್‌ 30 ರನ್‌(14 ಎಸೆತ, 2 ಬೌಂಡರಿ, 2 ಸಿಕ್ಸರ್‌) ಹೊಡೆದು ಕ್ಯಾಚ್‌ ನೀಡಿದರು. ನಮನ್ ಧೀರ್ ಮತ್ತು ತಿಲಕ್ ವರ್ಮಾ ಬಿರುಸಿನ ಬ್ಯಾಟಿಂಗ್ ಮಾಡಿ ಕೇವಲ 10 ಓವರ್​ಗಳಲ್ಲಿ ತಂಡದ ಮೊತ್ತವನ್ನು 141 ರನ್​ಗಳ ಗಡಿ ದಾಟಿಸಿದರು.

    ನಂತರ ಮೈದಾನಕ್ಕೆ ಬಂದ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಈ ಹಂತದಲ್ಲಿ ತಿಲಕ್ ವರ್ಮಾ 24 ಎಸೆತಗಳಲ್ಲಿ ತಮ್ಮ ಅರ್ಧ ಶತಕವನ್ನು ಪೂರ್ಣಗೊಳಿಸಿದರು.

    ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts