More

  ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್

  ಬೆಂಗಳೂರು: ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

  ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

  ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು  ವಿಚಾರಣೆ ನಡೆಸುತ್ತಿದ್ದಾರೆ. ನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

  ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.

  See also  ಅಳಿಯ, ಮಗಳ ಜಗಳದಲ್ಲಿ ಅತ್ತೆ ಪ್ರಾಣ ಹೋಯ್ತು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts