ಸಾವಿನಲ್ಲೂ ವಿಕೃತಿ ಕಾಣಬಹುದು ಎಂಬುದನ್ನು ನಿನ್ನಿಂದ ಕಲಿಯಬಹುದು; ನಟ ಜಗ್ಗೇಶ್​ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ Jagadish

Jaggesh Jagadish
Published on

ಬೆಂಗಳೂರು: ಮಠ, ಎದ್ಧೇಳು ಮಂಜುನಾಥ. ಸಿನಿಮಾಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ಯ ಪ್ರಶಸ್ತಿ ವಿಜೇತ ಗುರುಪ್ರಸಾದ್​ (Guruprasad) ಅವರ ಆತ್ಮಹತ್ಯೆ ಇಡೀ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದ್ದು, ಖ್ಯಾತ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ನಿರ್ದೇಶನ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದ ಗುರುಪ್ರಸಾದ್​ ಅವರ ಸಾವಿನ ಬಗ್ಗೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ (Jaggesh) ಮಾತನಾಡಿದ್ದರು. ಜಗ್ಗೇಶ್​ ಅವರ ಹೇಳಿಕೆ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಗ್​ಬಾಸ್​ ಸೀಸನ್​ 11ರ ಸ್ಫರ್ಧಿ ಜಗದೀಶ್​ (Jagadish) ಪ್ರತಿಕ್ರಿಯಿಸಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಬಿಗ್​ಬಾಸ್ ಸೀಸನ್​ 11ರ ಸ್ಫರ್ಧಿ ಹಗದೀಶ್​ (jagadish) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಂಖ್ಯೆಯ ಫಾಲೋವರ್ಸ್​ ಇದ್ದು, ಬಿಗ್​ಬಾಸ್​ ಮನೆಗೆ ಹೋಗಿ ಬಂದ ಮೇಲೆ ಫ್ಯಾನ್​ ಫೋಲೋಯಿಂಗ್​ ಜಾಸ್ತಿ ಆಗಿತ್ತು. ಇದೀಗ ಗುರುಪ್ರಸಾದ್​ ಸಾವಿನ ಕುರಿತು ಜಗ್ಗೇಶ್ (Jaggesh) ​ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಗ್ಗೇಶ್​ ಏಕವಚನದಲ್ಲೇ ವಾಗ್ದಾಳಿ ನಡೆಸುವ ಮೂಲಕ ಸದ್ದು ಮಾಡುತ್ತಿದ್ದಾರೆ.

ವಾವ್​ ಜಗ್ಗೇಶ್​ ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿಯೇ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರುಪ್ರಸಾದ್​ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ, ಎಂಥ ಮನುಷ್ಯ ನೀನು, ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ. ನಿನ್ನನ್ನು ನೀನು ರಾಘವೇಂದ್ರರ ಭಕ್ತ ಅಂತ ಹೇಳ್ತೀಯ. ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ. ‘ಮಠ’ ಸಿನಿಮಾದಲ್ಲಿ ಗುರುಪ್ರಸಾದ್ ನಿನಗೆ ಲೈಫ್ ಕೊಟ್ಟ. ಜಗ್ಗೇಶ್ ಯಾರು ಅಂತ ಇಡೀ ಕರ್ನಾಟಕ ಮರೆತುಹೋಗಿತ್ತು. ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ.

ನೀನು ಮರೆತು ಹೋಗಿದ್ದೀಯ. 25 ವರ್ಷದ ಹಿಂದೆ ಯಾವನಿಗೋ 5 ಲಕ್ಷ ರೂಪಾಯಿ ಕೊಡಬೇಕು ಅಂತ ಹನುಮಂತೇಗೌಡರನ್ನು ಕರೆದುಕೊಂಡು ನಮ್ಮ ಆಫೀಸ್​ಗೆ ಬಂದೆ. ಆವತ್ತು ನಾನು ನಿನ್ನ ರೈಟ್​ ಹೇಳು ಅಂದೆ. ನೀನೇನು ರೌಡಿನಾ, ಅವತ್ತೇ ನಿನ್ನ ಯೋಗ್ಯತೆ ಗೊತ್ತಾಯಿತು. ಗುರುಪ್ರಸಾದ್ ಬಗ್ಗೆ ನೀನು ಆಡಿದ ಮಾತು ನನಗಂತೂ ಜೀರ್ಣ ಆಗಿಲ್ಲ. ನಿನ್ನ ಮತ್ತು ಅಶೋಕನ ಡೀಲ್ ನನಗೆ ಚೆನ್ನಾಗಿ ಗೊತ್ತು. ಕಾಲಾಯ ತಸ್ಮೈ ನಮಃ. ಇಂದು ಗುರುಪ್ರಸಾದ್ ಮನೆಯ ಬಾಗಿಲಲ್ಲಿ ಇದ್ದ ಯಮ ನಾಳೆ ಯಾರ ಮನೆಗೆ ಬೇಕಾದರೂ ಬರಬಹುದು. ಕಾದು ನೋಡೋಣ ಎಂದು ನಟ ಜಗ್ಗೇಶ್ (jaggesh)​ ವಿರುದ್ಧ ಏಕವಚನದಲ್ಲೇ ಜಗದೀಶ್​ (Jagadish) ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net