25.9 C
Bengaluru
Wednesday, January 22, 2020

ಬೆಳಗಾವಿ: ಧರ್ಮಾಂಧತೆ ತೊಲಗಿಸಿದ ಶಿವಬಸವ ಶ್ರೀ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಬೆಳಗಾವಿ: ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಪ್ರಮುಖರಲ್ಲಿ ಶ್ರೀ ಡಾ.ಶಿವಬಸವ ಮಹಾಸ್ವಾಮೀಜಿಯೂ ಒಬ್ಬರು. ಅವರು ಸಮಾಜ ಅಜ್ಞಾನ, ಧರ್ಮಾಂಧತೆ ಹೋಗಲಾಡಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಆರ್.ಹಿರೇಮಠ ಹೇಳಿದ್ದಾರೆ.

ಇಲ್ಲಿನ ಶಿವಬಸವ ನಗರದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಡಾ.ಶಿವಬಸವ ಮಹಾಸ್ವಾಮೀಜಿ ಅವರ 130ನೇ ಜಯಂತ್ಯುತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.

ಶಿವಬಸವ ಮಹಾಸ್ವಾಮೀಜಿ ಅವರು ಅನ್ನ, ಅಕ್ಷರ, ಸಂಸ್ಕಾರ ದಾಸೋಹ ಮಾಡಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಉಚಿತ ಪ್ರಸಾದ ನಿಲಯ ತೆರೆದು ಸಿದ್ಧಗಂಗಾ ಶ್ರೀಗಳಂತೆ ಸಮಾಜ ಸೇವೆ ಮಾಡಿದ್ದಾರೆ. ಬಸವ ತತ್ತ್ವಕ್ಕೆ ನಿಷ್ಠರಾಗಿ ಹಲವಾರು ಜನರ ಜೀವನದಲ್ಲಿ ಬೆಳಕು ಚೆಲ್ಲಿದ್ದಾರೆ. ಕರ್ನಾಟಕ ಏಕೀಕರಣ, ಸ್ವಾತಂತ್ರೃ ಹೋರಾಟಗಾರ ಸೇರಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಅವರಲ್ಲಿ ಹುರುಪು ತುಂಬಿದ್ದಾರೆ ಎಂದು ಶ್ರೀಗಳ ಕಾರ್ಯವನ್ನು ಸ್ಮರಿಸಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಡೋಲಿಯ ಶಿವಾಜಿ ಕಾಗಣೀಕರ ಮಾತನಾಡಿ, ಇಂದಿನ ಶಿಕ್ಷಣ ಪದ್ಧತಿಯಲ್ಲಿ ನೈತಿಕತೆ ಮರೆಯಾಗುತ್ತಿದೆ. ಸಮಾಜದಲ್ಲಿ ನೀತಿ ಶಿಕ್ಷಣ ಬಿತ್ತುವುದು ಮಠಗಳ ಸ್ಮರಣೀಯವಾಗಿದೆ ಎಂದರು.

ಪರಿಸರಕ್ಕೆ ಮಾಲಿನ್ಯಕ್ಕಿಂತ ಮನುಷ್ಯನ ಮನಸ್ಸು ಹೊಲಸಾಗಿದೆ. ದುರಾಸೆಗಾಗಿ ಇಂದು ವಿಷ ಬಿತ್ತಿ ವಿಷ ಬೆಳೆಯುತ್ತಿದ್ದೇವೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ರೈತರು ಸಾವಯವ ಕೃಷಿ ಬೆನ್ನು ಹತ್ತಬೇಕಾಗಿದೆ ಎಂದು ರೈತರಿಗೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಡೋಲಿ ದುರುದುಂಡೀಶ್ವರ ಮಠದ ಶ್ರೀ ಗುರುಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರಂಜಿಮಠದ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಪೂಜ್ಯ ಶ್ರೀ ಸಿದ್ದರಾಮ ಸ್ವಾಮೀಜಿ ವೇದಿಕೆಯಲ್ಲಿದ್ದರು.

ಮಾಜಿ ಸಚಿವ, ಕೆಎಲ್‌ಇ ಸಂಸ್ಥೆ ಅಧ್ಯಕ್ಷ ಶಿವಾನಂದ ಕೌಜಲಗಿ ಉಪಸ್ಥಿತರಿದ್ದರು. ಪ್ರೊ.ಸಿ.ಜಿ.ಮಠಪತಿ, ಪೂಜ್ಯಶ್ರೀ ಮಹಾಂತದೇವರು ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...