Bihar Election: ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ, ಶೀಘ್ರದಲ್ಲೇ ಪ್ರಣಾಳಿಕೆ ಬಿಡುಗಡೆ ವಿಪಕ್ಷ ನಾಯಕ ರಾಹುಲ್​ ಗಾಂಧಿ !

Rahul Gandhi
Published on

Bihar Election: ಬಿಹಾರದ ಅರಾರಿಯಾದಲ್ಲಿ ಭಾನುವಾರ (ಆಗಸ್ಟ್ 24)​ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಕೂಟದ ಒಗ್ಗಟ್ಟು ಪ್ರದರ್ಶಿಸಿದರು.

ಮುಂಬರುವ ಚುನಾವಣೆಗಳತ್ತ ಗಮನ ಹರಿಸಿರುವ ರಾಹುಲ್, ಬಿಹಾರ ಇಂಡಿಯಾ ಮೈತ್ರಿ ಕೂಟದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿದ್ದು, ಶೀಘ್ರದಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿವೆ ಎಂದು ಹೇಳಿದರು. ನಮ್ಮ ಎಲ್ಲ ಮಿತ್ರರು ಸೈದ್ಧಾಂತಿಕವಾಗಿ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು ಫಲಿತಾಂಶಗಳು ಫಲಪ್ರದವಾಗುತ್ತವೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಿಜೆಪಿಗೆ ಸಹಾಯ ಮಾಡಲು ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗ ಬಿಜೆಪಿಯ ಲಾಭಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.

ಚಿರಾಗ್​ ಪಾಸ್ವಾನ್​ಗೆ ಮದುವೆಯಾಗುವಂತೆ ಸಲಹೆ ನೀಡಿದ ತೇಜಸ್ವಿ

ಪತ್ರಿಕಾಗೋಷ್ಠಿಯಲ್ಲಿ ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರನ್ನು ಮದುವೆಯ ಬಗ್ಗೆ ಯೋಚಿಸುವಂತೆ ತೇಜಸ್ವಿ ಯಾದವ್​ ಸಲಹೆ ನೀಡಿದರು. ತಕ್ಷಣವೇ ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಇದು ನನಗೂ ಅನ್ವಯಿಸುತ್ತದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net