

ಸಿಂಗಾಪುರ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಮಗಳೇ ಕಿಡ್ನಿ ದಾನ ಮಾಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ತಂದೆಗೆ ಮರುಜೀವ ಸಿಕ್ಕಿದೆ.
ಸಿಂಗಾಪುರದ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಯಾದವ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಸೋಮವಾರ ಐಸಿಯುಗೆ ಸ್ಥಳಾಂತರಿಸಲಾಯಿತು.
ಐಸಿಯು ವಾರ್ಡ್ಗೆ ಲಾಲು ಪ್ರಸಾದ್ ಅವರನ್ನು ವೈದ್ಯರು ಆಪರೇಷನ್ ಥಿಯೇಟರ್ನಿಂದ ಸ್ಥಳಾಂತರಿಸುವ ದೃಶ್ಯವನ್ನು ಟ್ವೀಟ್ ಮೂಲಕ ಶೇರ್ ಮಾಡಿಕೊಂಡಿರುವ ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ತಂದೆಗೆ ಕಿಡ್ನಿ ದಾನ ಮಾಡಿದ ನನ್ನ ಸಹೋದರಿ ರೋಹಿಣಿ ಆಚಾರ್ಯ ಮತ್ತು ಕಿಡ್ನಿ ಕಸಿ ಮಾಡಿಸಿಕೊಂಡ ತಂದೆ ಇಬ್ಬರೂ ಆರೋಗ್ಯವಾಗಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.