ಬೈಕ್‌ಗೆ ಬಸ್ ಡಿಕ್ಕಿ, ಸವಾರ ಗಂಭೀರ

Lorry Accident
Published on

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್‌ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಗಾಯಗೊಂಡವರನ್ನು ಮೂಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ (55) ಎಂದು ಗುರುತಿಸಲಾಗಿದೆ.

ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ವಾಡುತ್ತಿದ್ದಾಗ ಉಡುಪಿ ಕಡೆಯಿಂದ ಸರ್ವೀಸ್ ರಸ್ತೆಯಲ್ಲಿ ಬಂದ ತಡೆರಹಿತ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಸವಾರ ಪಾಂಡುರಂಗ ರಾವ್ ತಲೆ, ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪಘಾತದ ಭೀಕರ ದಶ್ಯ ಸ್ಥಳೀಯ ಅಂಗಡಿಯೊಂದರ ಸಿ.ಸಿ.ಕ್ಯಾಮೆರಾದಲ್ಲಿ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net