ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಗಂಭೀರ

accident-15
Published on

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಶ್ರೀನಿವಾಸ ಶೆಟ್ಟಿಗಾರ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀನಿವಾಸ ಶೆಟ್ಟಿಗಾರ ಅವರು ಹಳೆಯಂಗಡಿ ಒಳಪೇಟೆ ಹರಿಭಟ್ ರಸ್ತೆಯಿಂದ ಕಿನ್ನಿಗೋಳಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮೂಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಕಡೆಗೆ ಬರುತ್ತಿದ್ದ ಕಾರು ಹಳೆಯಂಗಡಿ ಜಂಕ್ಷನ್ ಬಳಿ ವೇಗವಾಗಿ ಮೂಲ್ಕಿ ಕಡೆಗೆ ಯೂಟರ್ನ್ ಮಾಡಿದ ಪರಿಣಾಮ ಕಾರು ಬೈಕ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಶ್ರೀನಿವಾಸ ಶೆಟ್ಟಿಗಾರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡರು. ಕಾರು ಚಾಲಕಿ ಶೀಲಾ ಕರ್ಕಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net