

ಪುತ್ತೂರು ಗ್ರಾಮಾಂತರ: ಬೈಕ್ ಮುಂದಿನಿಂದ ತೆರಳುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಜಂಕ್ಷನ್ ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ರಝಾಕ್ ಮುಸ್ಲಿಯಾರ್ ಕರಿಂಬಿಲ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಕುಂಬ್ರ ಜಂಕ್ಷನ್ ಬಳಿ ಎದುರಿನಿಂದ ತೆರಳುತ್ತಿದ್ದ ಪಿಕಪ್ ವಾಹನಕ್ಕೆ ಹಿಂದಿನಿಂದ ಹೋಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿರುವ ರಝಾಕ್ ಮುಸ್ಲಿಯಾರ್ ಅವರನ್ನು ತಕ್ಷಣ ಸ್ಥಳೀಯರು ಆಟೋದಲ್ಲಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಿರುವುದಾಗಿ ತಿಳಿದು ಬಂದಿದೆ.