ಬೈಕ್​ಗೆ ಲಾರಿ ಡಿಕ್ಕಿ, ಇಬ್ಬರು ಸವಾರರು ಸಾವು

ಧಾರವಾಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರು ಇಬ್ಬರು ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ.

ಬೈಕ್​ ಸವಾರರು ಇಬ್ಬರು ಧಾರವಾಡ-ಸವದತ್ತಿ ರಸ್ತೆಯಲ್ಲಿ ಹಾರೋಬೆಳವಡಿ ಗ್ರಾಮದ ಬಳಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಹೆಸರು ತಿಳಿದುಬಂದಿಲ್ಲ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.