More

    ರಾಜ್ಯೋತ್ಸವದಂದು ಬೈಕ್ ರ‌್ಯಾಲಿ

    ಬೆಳಗಾವಿ: ರಾಜ್ಯೋತ್ಸವ ದಿನದಂದು ಪೀರನವಾಡಿ ರಾಯಣ್ಣ ವೃತ್ತದಿಂದ ನಗರದ ರಾಣಿ ಚನ್ನಮ್ಮ ವೃತ್ತದವರೆಗೆ ಬೈಕ್ ರ‌್ಯಾಲಿ ಆಯೋಜಿಸಲಾಗಿದೆ ಎಂದು ಕರವೇ(ನಾರಾಯಣಗೌಡ ಬಣ) ಉಪಾಧ್ಯಕ್ಷ ಎಚ್.ಎಸ್. ಸೋಂಪುರ ತಿಳಿಸಿದ್ದಾರೆ.

    ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ಭಾಗದ ಪ್ರದೇಶದಲ್ಲಿ ಕನ್ನಡ ಉಳಿಸಿ-ಬೆಳೆಸಲು ಕನ್ನಡಿಗರು ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಲು ಬೈಕ್ ರ‌್ಯಾಲಿ ಆಯೋಜಿಸಲಾಗಿದೆ ಎಂದರು.

    ಕರಾಳ ದಿನಕ್ಕೆ ಅನುಮತಿ ಬೇಡ: ರಾಜ್ಯೋತ್ಸವ ದಿನದಂದು ಬೆಳಗಾವಿ ನಗರ ಸೇರಿದಂತೆ ಗಡಿ ಭಾಗದ ಯಾವುದೇ ಪ್ರದೇಶದಲ್ಲಿ ಮಹಾರಾಷ್ಟ್ರ
    ಏಕೀಕರಣ ಸಮಿತಿ (ಎಂಇಎಸ್)ಗೆ ಕರಾಳ ದಿನ ಆಚರಣೆಗೆ ಸರ್ಕಾರ, ಜಿಲ್ಲಾಡಳಿತ ಅನುಮತಿ ನೀಡಬಾರದು.

    ರಾಜ್ಯೋತ್ಸವ ವೇಳೆ ಕಪ್ಪು ಬಾವುಟ ಪ್ರದರ್ಶನ, ಅಡ್ಡಿ ಪಡಿಸಿದರೆ ಎಂಇಎಸ್ ಮುಖಂಡರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಾಗಿ ಜಿಲ್ಲಾಡಳಿತ, ಪೊಲೀಸ್ ಆಯುಕ್ತರು ಕನ್ನಡ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದರು.

    ಎಲ್ಲ ಜಿಲ್ಲೆಗಳಲ್ಲಿ ಸಭೆ: ರಾಜ್ಯೋತ್ಸವ ಸಡಗರದಿಂದ ಆಚರಿಸಲು ಎಲ್ಲ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರ ಸಭೆ ನಡೆಸಿ, ಸಜ್ಜುಗೊಳಿಸಲಾಗುತ್ತಿದೆ. ರಾಜ್ಯೋತ್ಸವ ಬೈಕ್ ರ‌್ಯಾಲಿಗೆ ಜಿಲ್ಲಾಡಳಿತ ಅನುಮತಿ ನೀಡಬೇಕು. ಕೋವಿಡ್-19 ಹೆಸರಿನಲ್ಲಿ ಅನುಮತಿ ನಿರಾಕರಣೆ ಮಾಡುವುದು ಸರಿಯಲ್ಲ. ಸಂಭ್ರಮಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು. ಕರವೇ ಸಂಚಾಲಕ ಮಹಾದೇವ ತಳವಾರ, ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts