ಎನ್​ಐಎ ತಂಡದ ಪೊಲೀಸ್ ವಾಹನಕ್ಕೆ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಲಿ

NIA Police
Published on

ಪುತ್ತೂರು: ಇತ್ತೀಚೆಗೆ ಸರ್ಕಾರಿ ವಾಹನಗಳು ಇಲ್ಲವೇ ಸರ್ಕಾರಿ ಅಧಿಕಾರಿಗಳು-ಜನಪ್ರತಿನಿಧಿಗಳು ಸಂಚರಿಸುತ್ತಿದ್ದ ವಾಹನಗಳ ಅಪಘಾತದಲ್ಲಿ ಸಾವು-ನೋವು ಸಂಭವಿಸುತ್ತಿರುವುದು ಹೆಚ್ಚಾಗಿದ್ದು, ಇಂದು ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಸ್ತೆಯ ಸಂಪ್ಯ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಒಬ್ಬರು ಮೃತ ಪಟ್ಟಿದ್ದಾರೆ.

ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿ. ಲಕ್ಷ್ಮಣ ನಾಯ್ಕ(50) ಮೃತ ವ್ಯಕ್ತಿಯಾಗಿದ್ದಾರೆ. ಪೊಲೀಸ್ ವಾಹನ ಜಿಲ್ಲೆಯ ಡಿಆರ್​​ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net