ಫ್ಲೈ-ಓವರ್​ನಲ್ಲಿ ಅಪಘಾತ, ಮೇಲಿನಿಂದ ಕೆಳಕ್ಕೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು..

ಆನೇಕಲ್: ರಾಜಧಾನಿ ಬೆಂಗಳೂರಿನಲ್ಲಿ ಫ್ಲೈ-ಓವರ್​ನಿಂದ ವಾಹನಗಳು ಕೆಳಕ್ಕೆ ಬಿದ್ದಂಥ ಭೀಕರ ಅಪಘಾತಗಳು ನಡೆದಿದ್ದು, ಇಂದು ಅಂಥದ್ದೇ ಒಂದು ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮವಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯ ಎಲೆವೇಟೆಡ್ ಫ್ಲೈ-ಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸಾಫ್ಟ್​ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆಂಧ್ರಪ್ರದೇಶ ಮೂಲದ ಕೌರಿ ನಾಗಾರ್ಜುನ ಎಂಬಾತ ಸಾವಿಗೀಡಾದ ಬೈಕ್ ಸವಾರ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಪಲ್ಸರ್​ … Continue reading ಫ್ಲೈ-ಓವರ್​ನಲ್ಲಿ ಅಪಘಾತ, ಮೇಲಿನಿಂದ ಕೆಳಕ್ಕೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು..