ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

thomas
Published on

ಕೊಕ್ಕಡ: ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಸಕರಿಯ ಎಂಬುವರ ಪುತ್ರ ಥೋಮಸ್ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಥೋಮಸ್ ಗುರುವಾರ ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಮನೆಯಿಂದ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತವಾಗಿದೆ. ಲಾರಿಯಡಿಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net