More

    ಪ್ರಾಣಾಪಾಯದಿಂದ ಬೈಕ್ ಸವಾರ ಪಾರು

    ಅಥಣಿ: ಪಟ್ಟಣದ ವಿಜಯಪುರ- ಜೇವರ್ಗಿ ರಾಜ್ಯ ಹೆದ್ದಾರಿಯ ಬಿಇಒ ಕಚೇರಿ ಬಳಿ ಚಲಿಸುತ್ತಿದ್ದ ಬೈಕ್ ಸವಾರನೋರ್ವನ ಕುತ್ತಿಗೆಗೆ ಗಾಳಿಪಟ ಸುತ್ತಿಕೊಂಡು ಅವಾಂತರ ಸೃಷ್ಟಿಸಿದ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಸ್ಥಳೀಯ ನಿವಾಸಿ ಬುರಾನ್ ಮುಕ್ಬುಲ್ ಜಮಾದಾರ್ ಎಂಬುವವರು ಸಂಕೇಶ್ವರ- ವಿಜಯಪುರ ಮಾರ್ಗವಾಗಿ ಮನೆಗೆ ತೆರಳುತ್ತಿದ್ದರು. ಅವರು ಹೋಗುತ್ತಿದ್ದ ದಾರಿಯಲ್ಲಿ ಮಕ್ಕಳು ಗಾಳಿಪಟದೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಏಕಾಏಕಿ ಗಾಳಿಪಟವೊಂದು ಹಾರಿ ಅವರ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ಬುರಾನ್, ಸ್ಥಳದಲ್ಲೇ ಬಿದ್ದಿದ್ದಾರೆ. ಕುತ್ತಿಗೆಗೆ ಗಾಳಿಪಟ ಸುತ್ತಿಕೊಂಡಿದ್ದರಿಂದ ಕತ್ತಿಗೆ ಗಾಯವಾಗಿದೆ.

    ಪ್ರಾಥಮಿಕ ಚಿಕಿತ್ಸೆಗಾಗಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಆಟವಾಡುತ್ತಿದ್ದ ಮಕ್ಕಳು ಓಡಿ ಹೋಗಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ಬುರಾನ್, ಮಕ್ಕಳು ರಸ್ತೆಯ ಸಮೀಪದಲ್ಲಿ ಈ ರೀತಿ ಗಾಳಿಪಟದ ಜತೆ ಆಟ ಆಡದಂತೆ ನೋಡಿಕೊಳ್ಳುವಂತೆ ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ. ಗಾಳಿಪಟದ ಹಾವಳಿ ಹೆಚ್ಚಾಗಿದ್ದರಿಂದ ಗಾಳಿಪಟ ಹಾರಿಸುವವರ ಮೇಲೆ ನಿಗಾ ಇಡುವಂತೆ ಪಟ್ಟಣದ ಪೊಲೀಸ್ ಠಾಣೆಗೆ ಸಾರ್ವಜನಿಕರೊಂದಿಗೆ ತೆರಳಿ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts