ಬೈಕ್​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್​; ಸವಾರ ಮೃತ್ಯು

ಕೋಲಾರ: ಖಾಸಗಿ ಬಸ್ಸೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಅನಿಗಾನಹಳ್ಳಿ ಗೇಟ್ ಬಳಿ ನಡೆದಿದೆ. ಮೃತ ಬೈಕ್​ ಸವಾರನನ್ನು ಅಕ್ಕಯ್ಯಮ್ಮನದಿನ್ನೆ ಗ್ರಾಮದ ಮುರಳಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಖಾಸಗಿ ಬಾಸ್​ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಂಗಾರಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ದ ದಂಗೆ ಎದ್ದವರ … Continue reading ಬೈಕ್​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್​; ಸವಾರ ಮೃತ್ಯು