ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಂಕಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ತಡಸ- ಹಾನಗಲ್ಲ ರಸ್ತೆಯ ಹುನಗುಂದ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಮದನ ಮಹಬಳೇಶ್ವರ ಮಾಳದಕರ (25) ಮೃತ ಯುವಕ. ಗಂಭೀರ ಗಾಯಗೊಂಡಿದ್ದ ಬೈಕ್​ನ ಹಿಂಬದಿ ಸವಾರ ಬಮ್ಮನಹಳ್ಳಿಯ ಬಸವರಾಜ ಶಿವಪುತ್ರಪ್ಪ ಮಡ್ಲಿ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಿಗ್ಗಾಂವಿಯಿಂದ ಹುನಗುಂದ ಮಾರ್ಗವಾಗಿ ಬಮ್ಮನಹಳ್ಳಿಗೆ ಸ್ಕೂಟರ್ ಮೇಲೆ ಹೋಗುತ್ತಿದ್ದಾಗ ಎದುರಿಗೆ ಲಕ್ಕಿಕೊಪ್ಪ ಗ್ರಾಮದ ಕಡೆಯಿಂದ ಕೋಣನಕೇರಿ ಗ್ರಾಮದ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು ಬಂಕಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.