ವಿಜಯವಾಣಿ ಸುದ್ದಿಜಾಲ ಧಾರವಾಡ
ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮಂಗಳಗಟ್ಟಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ದುರ್ಗಪ್ಪ ಹರಿಜನ ಮೃತ ವ್ಯಕ್ತಿ. ಮೂಲತಃ ಯಡಳ್ಳಿ ಗ್ರಾಮದ ಈತ ಮಂಗಳಗಟ್ಟಿ ಪಕ್ಕದ ಕುರುಬಗಟ್ಟಿ ಗ್ರಾಮದಲ್ಲಿ ನೆಲೆಸಿದ್ದ. ಬೈಕ್‌ನಲ್ಲಿ ಒಬ್ಬನೇ ಹೊರಟಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

TAGGED:Biker dies of heart attack