More

    ಸರ್ವ ಜನಾಂಗದ ಕಲ್ಯಾಣಕ್ಕೆ ಸರ್ಕಾರ ಬದ್ಧ

    ಬೀಳಗಿ: ಪ್ರಧಾನಿ ನರೇಂದ್ರ ಮೋದಿ ಸರ್ವ ಜನಾಂಗದ ಕಲ್ಯಾಣಕ್ಕಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮಲು ಹೇಳಿದರು.

    ತಾಲೂಕಿನ ಯಡಹಳ್ಳಿ ಗ್ರಾಮದ ತಮ್ಮ ಅಭಿಮಾನಿಯೊಬ್ಬರ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಳೆದ ವರ್ಷ 2020ರಲ್ಲಿ ನೆರೆ ಹಾವಳಿ ಜತೆಗೆ ಕೋವಿಡ್ ಬಂದಿರುವುದು ಎಲ್ಲರಿಗೂ ಗೊತ್ತು. ಮುಖ್ಯಮಂತ್ರಿ ಅವರು ಯಾವುದನ್ನೂ ಲೆಕ್ಕಿಸದೆ ರಾಜ್ಯದ ಜನರ ಆರೋಗ್ಯ ಹಾಗೂ ಅಭಿವೃದ್ಧಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ರೂಪಿಸಿದ್ದಾರೆ. ರೈತರ ಬೆಳೆಹಾನಿಗೆ ಸೂಕ್ತ ಪರಿಹಾರ, ಸಲ್ ಬಿಮಾ ಯೋಜನೆ ಹಾಗೂ ಇನ್ನೂ ಅನೇಕ ಯೋಜನೆಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದರು.

    ನ್ಯಾಯಮೂರ್ತಿ ನಾಗಮೋಹನದಾಸ ಅವರ ಎಸ್ಸಿ, ಎಸ್‌ಟಿ ಮೀಸಲಾತಿ ವರದಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೆಚ್ಚಿನ ಗಮನ ಹರಿಸಿ ಶೀಘ್ರದಲ್ಲಿ ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜದ ಬೇಡಿಕೆಯಂತೆ ಮೀಸಲಾತಿ ಹೆಚ್ಚಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಶೇ.2 ರಷ್ಟು ಮೀಸಲಾತಿ ಹೆಚ್ಚಿಸಲಾಗುವುದು ಎಂದರು.

    ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭವಿಷ್ಯ ಹೇಳುವುದನ್ನು ಕಲಿತಿದ್ದು, ಮೊನ್ನೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಉತ್ತರ ನೀಡಿದ್ದಾರೆ. ತಮ್ಮ ಪ್ರತಿಷ್ಠೆ ಬಗ್ಗೆ ಮೊದಲು ಅರಿತು ಮಾತನಾಡಬೇಕು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನುವುದನ್ನು ಅರಿತುಕೊಳ್ಳಬೇಕು. ಬಿಜೆಪಿ ಸರ್ಕಾರ ದೀನ-ದಲಿತರು, ಹಿಂದುಳಿದ ಜನಾಂಗ, ಶೋಷಿತ ಸಮುದಾಯ ಮತ್ತು ರೈತರು, ನೇಕಾರ ಸಮುದಾಯದ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮಾಜಿ ಅಧ್ಯಕ್ಷ ಎಂ.ಎಂ.ಶಂಭೋಜಿ, ಸಂಗಪ್ಪ ಕಟಗೇರಿ, ವಿ.ಜಿ.ರೇವಡಿಗಾರ, ಬಿಜೆಪಿ ಜಿಲ್ಲಾ ಯುವ ಅಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಇನ್ನೂ ಅನೇಕರು ಇದ್ದರು.



    ಸರ್ವ ಜನಾಂಗದ ಕಲ್ಯಾಣಕ್ಕೆ ಸರ್ಕಾರ ಬದ್ಧ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts