25.1 C
Bangalore
Friday, December 6, 2019

ಪಿಯು ಬಯೋಮೆಟ್ರಿಕ್ ದೂರ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಯಂತ್ರ ಅಳವಡಿಸಿ 8 ತಿಂಗಳಾದರೂ ಸಂಪರ್ಕ ಇಲ್ಲ * ಕೆಲಸ ಪೂರ್ಣಗೊಳಿಸದ ಗುತ್ತಿಗೆ ಕಂಪನಿ * ಇಲಾಖೆ ಬೇಜವಾಬ್ದಾರಿ ಆರೋಪ

– ಹರೀಶ್ ಮೋಟುಕಾನ ಮಂಗಳೂರು
ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಕಚೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಕಂಪ್ಯೂಟರ್, ಸಾಫ್ಟ್‌ವೇರ್, ಬೆರಳಚ್ಚು ಯಂತ್ರ ಕಲ್ಪಿಸಿ ಎಂಟು ತಿಂಗಳಾದರೂ, ಸಂಪರ್ಕ ಕಲ್ಪಿಸಿಲ್ಲ. ಹೀಗಾಗಿ, ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಆದೇಶ ಇನ್ನೂಅನುಷ್ಠಾನ ಆಗಿಲ್ಲ.
ಉಪನ್ಯಾಸಕರ ಮೋಸದಾಟ ತಪ್ಪಿಸಲು 2018ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿತ್ತು. ಅನುದಾನಿತ ಕಾಲೇಜುಗಳಿಗೆ ಆಡಳಿತ ಮಂಡಳಿಯೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.
ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್, ಸಾಫ್ಟ್‌ವೇರ್, ಬೆರಳಚ್ಚು ಯಂತ್ರ ಒದಗಿಸಿ ಸಂಪರ್ಕ ಕಲ್ಪಿಸಲು ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಕಂಪನಿ ಕಂಪ್ಯೂಟರ್, ಸಾಫ್ಟ್‌ವೇರ್, ಬೆರಳಚ್ಚು ಯಂತ್ರ ಕಲ್ಪಿಸಿದ್ದು, ಸಂಪರ್ಕ ನೀಡದೆ ತಲೆಮರೆಸಿಕೊಂಡಿದೆ. ಸದ್ಯ ಸಹಿ ಹಾಕುವ ಹಳೇ ಪದ್ಧತಿಯೆ ಮುಂದುವರಿದಿದೆ.
ಈ ಹಿಂದೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಎಲ್ಲ ಕಚೇರಿ, ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅಳವಡಿಸಿತ್ತು. ಆದರೆ, ಇಲಾಖೆಯ ಉದ್ದೇಶ ಈಡೇರಲಿಲ್ಲ. ಕೆಲವು ಉಪನ್ಯಾಸಕರು ತಮ್ಮ ಬೆರಳಚ್ಚು ನೀಡುವ ಬದಲು ಕಚೇರಿಯ ಗುಮಾಸ್ತ ಅಥವಾ ಬೇರೆಯವರ ಬೆರಳಚ್ಚು ನೀಡುವ ಮೂಲಕ ಹಾಜರಾತಿ ಹಾಕುತ್ತಿದ್ದರು. ಈ ಬಗ್ಗೆ ದೂರು ಕೇಳಿಬಂದ ಕಾರಣ ಹಾಜರಾತಿ ವ್ಯವಸ್ಥೆಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಿದ್ದರು. ಉಪನ್ಯಾಸಕರ ಮೋಸದಾಟ ತಡೆಯಲು ಆಧಾರ್ ನಂಬರ್ ದಾಖಲಿಸಿ ಬೆರಳಚ್ಚು ನೀಡಿ ಬಯೋಮೆಟ್ರಿಕ್ ಹಾಜರಾತಿ ಮಾಡಲು ಇಲಾಖೆ ಯೋಜನೆ ರೂಪಿಸಿತ್ತು. ಅದಕ್ಕಾಗಿ ಕಾಲೇಜುಗಳಿಗೆ ತಲುಪಿಸಿದ ಪೂರಕ ಸಾಮಗ್ರಿಗಳು ಕೆಲವೆಡೆ ದೂಳು ತಿನ್ನುತ್ತಿವೆ.
ಗುತ್ತಿಗೆ ವಹಿಸಿಕೊಂಡ ಕಂಪನಿ ಕಂಪ್ಯೂಟರ್, ಸಾಫ್ಟ್‌ವೇರ್, ಬೆರಳಚ್ಚು ಯಂತ್ರ ತಂದು ಹಾಕಿ, ಅದನ್ನು ಮುಟ್ಟಬೇಡಿ, ನಾವೇ ಬಂದು ಸಂಪರ್ಕ ಕಲ್ಪಿಸಿ ಕೊಡುತ್ತೇವೆ. ಆ ಬಳಿಕ ಬಳಸಬಹುದು ಎಂದು ಸಲಹೆ ನೀಡಿ ಹೋಗಿದೆ. ಎಂಟು ತಿಂಗಳಾದರೂ ಅವರು ಬಂದಿಲ್ಲ ಎಂದು ಉಪನ್ಯಾಸಕರೊಬ್ಬರು ವಿಜಯವಾಣಿಗೆ ತಿಳಿಸಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಏಳೆಂಟು ತಿಂಗಳ ಹಿಂದೆ ಕಂಪ್ಯೂಟರ್, ಬೆರಳಚ್ಚು ಯಂತ್ರ ತಂದು ಹಾಕಲಾಗಿದೆ. ಕಂಪನಿ ಪ್ರತಿನಿಧಿ ತಾವೇ ಬಂದು ಜೋಡಿಸಿ ಕೊಡುವುದಾಗಿ ಹೇಳಿ ಹೋಗಿದ್ದಾರೆ. ಕೆಲವು ಕಡೆಗಳಲ್ಲಿ ಅಳವಡಿಕೆ ಕಾರ್ಯ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ. ಶೀಘ್ರ ಜೋಡಣೆಯ ನಿರೀಕ್ಷೆ ಇದೆ.
– ಅಬ್ದುಲ್ ರಜಾಕ್, ಉಪನ್ಯಾಸಕರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸರ್ಕಾರದಿಂದಲೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆ ಮಾಡುತ್ತಿದ್ದಾರೆ. ಅನುದಾನಿತ ಕಾಲೇಜುಗಳು ತಾವೇ ಬಯೋಮೆಟ್ರಿಕ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ. ಇದಕ್ಕೆ ಬಹಳಷ್ಟು ಕಾಲೇಜುಗಳಿಂದ ವಿರೋಧ ವ್ಯಕ್ತವಾಗಿದೆ. ಈ ಗೊಂದಲವನ್ನು ಇಲಾಖೆಯೇ ಸರಿಪಡಿಸಬೇಕು.
ರಾಜೇಶ್, ಉಪನ್ಯಾಸಕರು, ಅನುದಾನಿತ ಪ.ಪೂ.ಕಾಲೇಜು

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...