ಬಿಪರ್​ಜಾಯ್​ ಚಂಡಮಾರುತ | ಜೂನ್​ 19ರ ತನಕ ಮಳೆ ಸಾಧ್ಯತೆ; ಎಲ್ಲೆಲ್ಲಿ?

Rain
Published on

ಬೆಂಗಳೂರು: ಬಿಪರ್​ಜಾಯ್ ಚಂಡಮಾರುತದ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶ 3-4 ಡಿಗ್ರಿ ಸೆಲ್ಸಿಯಸ್​ ಹೆಚ್ಚಳವಾಗುವ ಸಾಧ್ಯತೆ ಇದ್ದು ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಬಹುದು.

ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಮುಂದಿನ 5 ದಿನ ಬೆಂಗಳೂರಿನ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದ್ದು ಸುಮಾರು 60 ರಿಂದ 65 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು. ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಜೂನ್ 19 ರವರೆಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ.

ಎಲ್ಲೆಲ್ಲಿ ಮಳೆಯಾಗಬಹುದು?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿ ಹಲವೆಡೆ ಮಳೆಯಾಗಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net