More

    ಬೈಕಾಟ್ ಮಾಲ್ಡೀವ್ಸ್‌; ಕಡಲ ಕಿನಾರೆಯಲ್ಲಿ ಬರ್ತಡೇ ಸೆಲೆಬ್ರೆಟ್​ ಮಾಡಿದ ಮಾದಕ ನಟಿ ಬಿಪಾಶಾ ಬಸುಗೆ ಛೀಮಾರಿ

    ‘ನಿಮಗೆ ಅವಮಾನ’ ಆಗಬೇಕು ಎಂದ್ರು ಫ್ಯಾನ್ಸ್​​

    ಮುಂಬೈ: ಬಾಲಿವುಡ್​​ ನಟಿ ಬಿಪಾಶಾ ಬಸು ತನ್ನ ಹುಟ್ಟುಹಬ್ಬವನ್ನು ಆಚರಿಸಲು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದರು. ಮಾಲ್ಡೀವ್ಸ್ ಪ್ರವಾಸದ ಮಾದಕ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿಯನ್ನು ಮಾಲ್ಡೀವ್ಸ್​​ ನಾಯಕರು ಟೀಕಿಸಿದ್ದರು. ಈ ಬೆನ್ನಲ್ಲೆ ಕೆಲವು ಸೆಲೆಬ್ರೆಟಿಗಳು ಮಾಲ್ಡೀವ್ಸ್​​ ​ ಬೈಕಾಟ್​​ ಮಾಡಿ ಎನ್ನುವ ಧ್ವನಿ ಕೇಳಿ ಬರುತ್ತಿದ್ದಂತೆ ಬಾಲಿವುಡ್​​ ನಟಿ ಭೇಟಿ ನೀಡಿದ್ದು ಸಖತ್​ ವೈರಲ್​ ಆಗುತ್ತಿದೆ.

    ಜನವರಿ 7 ರಂದು ಬಿಪಾಶಾ ಮಾಲ್ಡೀವ್ಸ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ಬಿಪಾಶಾ ಸಮುದ್ರ ತೀರದಲ್ಲಿ ನಿಂತು, ಕೆಂಪು ಸ್ವಿಮ್​​ ಸೂಟ್​​ನಲ್ಲಿ ಮತ್ತು ಅದರ ಮೇಲೆ ನೀಲಿ ಮತ್ತು ಬಿಳಿ ನಿಲುವಂಗಿಯನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

    ನರೇಂದ್ರ ಮೋದಿಯನ್ನು ಟೀಕಿಸಿದ್ದ ಮಾಲ್ಡೀವ್ಸ್​​ ನಾಯಕರನ್ನು ದೇಶದ ರಾಜಕೀಯ ನಾಯಕರು ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ ಹೊರತಾಗಿಯೂ ಮಾಲ್ಡೀವ್ಸ್‌ನಲ್ಲಿ ವಿಹಾರಕ್ಕೆ ಹೋಗಿದ್ದೀರಾ ‘ನಿಮಗೆ ಅವಮಾನ’ ಆಗಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆ ಫೋಟೋಗಳು ಸಾಕಷ್ಟು ನೆಗೆಟಿವ್ ಕಾಮೆಂಟ್ ಬಂದಿದೆ. ನಿಮಗೆ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಕಿತ್ತಾಟ ಗೊತ್ತಿಲ್ಲವಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    ಏನಿದು ವಿವಾದ?ಕಡಲತಡಿಯ ಪ್ರವಾಸೋದ್ಯಮವನ್ನೇ ದೊಡ್ಡ ಆದಾಯವಾಗಿ ಹೊಂದಿರುವ ಮಾಲ್ದೀವ್ಸ್, ಲಕ್ಷದ್ವೀಪಕ್ಕೆ ಸಿಗುತ್ತಿರುವ ಪ್ರಚಾರ-ಮನ್ನಣೆ ಸಹಿಸಿಕೊಳ್ಳಲಾಗದೆ ಅಲ್ಲಿನ ಜನಪ್ರತಿನಿಧಿಗಳು ಭಾರತವನ್ನು ಅವಹೇಳನ ಮಾಡುವಂತೆ ಅಭಿಪ್ರಾಯ ವ್ಯಕ್ತಪಡಿಸಿರುವುದು ಕೋಲು ಕೊಟ್ಟು ಪೆಟ್ಟು ತಿಂದಂಥ ಪರಿಸ್ಥಿತಿ ಸೃಷ್ಟಿಯಾಗಿಸಿದೆ. ಮಾಲ್ದೀವ್ಸ್ ಉಪ ಸಚಿವೆ ಮರಿಯಂ ಶಿಯುನಾ ಮುಂತಾದವರು ಪ್ರವಾಸೋದ್ಯಮದ ವಿಚಾರದಲ್ಲಿ ಭಾರತವನ್ನು ಅವಮಾನಿಸಿ ಸೋಷಿಯಲ್ ಮೀಡಿಯಾ ತಾಣವಾದ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೆ ಭಾರತ ಮಾಲ್ದೀವ್ಸ್​ನ ಗುರಿಯಾಗಿಸುತ್ತಿದೆ, ಕಡಲತಡಿಯ ಪ್ರವಾಸೋದ್ಯಮದಲ್ಲಿ ಮಾಲ್ದೀವ್ಸ್ ಜತೆ ಸ್ಪರ್ಧೆಗಿಳಿದರೆ ಭಾರತ ಸವಾಲೆದುರಿಸಬೇಕಾಗುತ್ತದೆ ಎಂದಿರುವ ಅವರು ಮೋದಿಯನ್ನೂ ನಿಂದಿಸಿ ಪೋಸ್ಟ್ ಮಾಡಿದ್ದರು. ಮಾಲ್ದೀವ್ಸ್ ಎಂಪಿ ಜಹಿದ್ ರಮೀಜ್ ಎಂಬಾತ, ಶ್ರೀಲಂಕಾದಂಥ ರಾಷ್ಟ್ರದ ಸಣ್ಣ ಆರ್ಥಿಕತೆಯನ್ನು ಭಾರತ ನಕಲು ಮಾಡಿ ಹಣ ಮಾಡುತ್ತಿದೆ ಎಂದು ಟೀಕಿಸಿದ್ದು ಕೂಡ ತೀವ್ರ ಆಕ್ರೋಶಕ್ಕೆ ಒಳಗಾಗಿದೆ.

    View this post on Instagram

    A post shared by Bipasha Basu (@bipashabasu)

    ಮೂವರು ಸಚಿವರ ಅಮಾನತು: ವಿದೇಶಿ ನಾಯಕರು ಮತ್ತು ಉನ್ನತ ಶ್ರೇಣಿಯ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ಮಾಲ್ದೀವ್ಸ್ ಸರ್ಕಾರದ ಗಮನಕ್ಕೆ ಬಂದಿದೆ. ಅದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು, ಸರ್ಕಾರದ ದೃಷ್ಟಿಕೋನವಲ್ಲ ಎಂದು ಮಾಲ್ದೀವ್ಸ್ ಸರ್ಕಾರ ಬಳಿಕ ಸ್ಪಷ್ಟೀಕರಣ ನೀಡಿದೆ. ಮಾತ್ರವಲ್ಲ, ಇದಾದ ಕೆಲವೇ ಹೊತ್ತಲ್ಲಿ ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಲ್ದೀವ್ಸ್ ಯುವ ಸಬಲೀಕರಣ ಸಚಿವಾಲಯದ ಉಪ ಸಚಿವೆಯರಾದ ಮರಿಯಂ ಶಿಯುನಾ, ಮಾಲ್​ಷಾ, ಸಾರಿಗೆ ಸಚಿವಾಲಯ ಉಪ ಸಚಿವ ಹಸನ್ ಜಿಹಾನ್ ಅವರನ್ನು ಮಾಲ್ದೀವ್ಸ್ ಸರ್ಕಾರ ಅಮಾನತುಗೊಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts