More

    ಭಿರಡಿ ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

    ರಾಯಬಾಗ: ತಾಲೂಕಿನ ಭಿರಡಿ ಗ್ರಾಮದಲ್ಲಿ 2005ರಲ್ಲಿ ಕೃಷ್ಣಾ ನದಿ ಪ್ರವಾಹದಲ್ಲಿ ತೊಂದರೆ ಅನುಭವಿಸಿದ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳಲ್ಲಿ ಅನರ್ಹ ಕುಟುಂಬದವರು ವಾಸವಾಗಿದ್ದಾರೆ. ಅವರನ್ನು ಕೂಡಲೇ ತೆರವುಗೊಳಿಸಬೇಕೆಂದು ಒತ್ತಾಯಿಸಿ ಅರ್ಹ ಪಲಾನುಭವಿಗಳು ಹಾಗೂ ಗ್ರಾಮಸ್ಥರು ಭಿರಡಿ ಗ್ರಾಪಂಗೆ ಬೀಗ ಹಾಕಿ ಬುಧವಾರ ಪ್ರತಿಭಟಿಸಿದರು.

    2005ರಲ್ಲಿ ಕೃಷ್ಣಾ ನದಿಯ ಪ್ರವಾಹದಲ್ಲಿ ಮನೆ ಮುಳುಗಡೆಯಾದ ಸಂತ್ರಸ್ತರಿಗೆ ಭಿರಡಿ ಗ್ರಾಮದ ರಿ.ಸ.ನಂ. 21ರಲ್ಲಿ ಸುಮಾರು ನಾಲ್ಕು ಎಕರೆ ಜಾಗದಲ್ಲಿ 132 ಅರ್ಹ ಫಲಾನುಭವಿಗಳಿಗೆ ಸರ್ಕಾರ ಮನೆ ನಿರ್ಮಿಸಿಕೊಟ್ಟಿತ್ತು. ಮನೆಗಳನ್ನು ಅರ್ಹ ಪಲಾನುಭವಿಗಳಿಗೆ ವಿತರಿಸುವ ಮುಂಚೆಯೇ ಆ ಮನೆಗಳಲ್ಲಿ ಅನಧಿಕೃತವಾಗಿ ಬೇರೆ ಕುಟುಂಬಗಳು ವಾಸವಾಗಿವೆ. ಅಧಿಕೃತವಾಗಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ಈ ಮನೆಗಳನ್ನು ಹಂಚುವುದರ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದರೂ ಗ್ರಾಪಂ, ತಾಪಂ ಮತ್ತು ತಹಸೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಪ್ರಕಾಶ ವಡ್ಡರ ಹಾಗೂ ಉಪತಹಸೀಲ್ದಾರ್ ಪರಮಾನಂದ ಮಂಗಸೂಳಿ ಅವರನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡರು. 2005ರ ಗ್ರಾಪಂ ಪಟ್ಟಿಯ ಪ್ರಕಾರ ಮಂಜೂರಾದ ಮನೆಗಳನ್ನು ಅರ್ಹ ಪಲಾನುಭವಿಗಳಿಗೆ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.

    ಉಪತಹಸೀಲ್ದಾರ್ ಪರಮಾನಂದ ಮಂಗಸೂಳೆ ಅವರು, ನಾಳೆಯಿಂದಲೇ 2005ರಲ್ಲಿ ಸರ್ಕಾರದಿಂದ ಸಂತ್ರಸ್ತರಿಗಾಗಿ ಮಂಜೂರಾದ ಈ ಮನೆಗಳಲ್ಲಿ ಯಾರು ಇದ್ದಾರೆ ಎಂದು ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಚಿದಾನಂದ ತೇಲಿ, ಬಸವರಾಜ ತಿಗಡಿ, ವಸಂತ ಘೇನಾನಿ, ಶಂಕರ ಪಾಟೀಲ, ಲಕ್ಷ್ಮೀಬಾಯಿ ತೇಲಿ, ಶಾರವ್ವ ನಾವಿ, ಮಂಗಲ ಬಿಸನಕೊಪ್ಪ, ಕಸ್ತೂರಿ ಬನಹಟ್ಟಿ, ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts