More

    ರಾಜ್ಯದಲ್ಲಿ ಹಕ್ಕಿಜ್ವರ ಇದೆಯಾ? ಸತ್ತ ಪಕ್ಷಿಗಳ ಮರಣೋತ್ತರ ಪರೀಕ್ಷಾ ವರದಿ ಬಗ್ಗೆ ಸಚಿವರು ಹೇಳಿದ್ದಿಷ್ಟು…

    ಚಿಕ್ಕಬಳ್ಳಾಪುರ: ಕೋವಿಡ್​ 19 ಜತೆಗೆ ರೂಪಾಂತರಿ ಕರೊನಾ ಆತಂಕ ಎಲ್ಲೆಡೆ ದಟ್ಟವಾಗಿದೆ. ಇದೀಗ ಹಕ್ಕಿಜ್ವರ ಭೀತಿಯೂ ಆವರಿಸಿದೆ. ಮಂಗಳೂರಲ್ಲಿ ಕಾಗೆಗಳು, ಶಿವಮೊಗ್ಗದಲ್ಲಿ ಬೆಳ್ಳಕ್ಕಿ, ಚಿಕ್ಕಬಳ್ಳಾಪುರದಲ್ಲಿ ಪಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿತ್ತು.

    ಈ ಬಗ್ಗೆ ಶುಕ್ರವಾರ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರದ ಪ್ರಕರಣ ಕಂಡುಬಂದಿಲ್ಲ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಲವು ಹಕ್ಕಿಗಳು ಅಸಹಜವಾಗಿ ಸತ್ತಿವೆಯಷ್ಟೆ. ಆದರೆ ಅವು ಹಕ್ಕಿಜ್ವರದಿಂದ ಸತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿರಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು

    ರಾಜ್ಯದಲ್ಲಿ ಇದುವರೆಗೂ ಯಾವುದೇ ಹಕ್ಕಿ ಜ್ವರದ ಪ್ರಕರಣ ಪತ್ತೆಯಾಗಿಲ್ಲ. ಕೋಳಿ ಮಾಂಸ ತಿನ್ನುವ ಸಾರ್ವಜನಿಕರು 70-80 ಡಿಗ್ರಿಯಲ್ಲಿ ಬೇಯಿಸಿ ತಿನ್ನಬೇಕು. ಕೋಳಿ ಸಾಕಣೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು. ಚಿಕ್ಕಬಳ್ಳಾಪುರದಲ್ಲಿ ನಿನ್ನೆ ಪತ್ತೆಯಾಗಿದ್ದ ಸತ್ತ ಪಕ್ಷಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

    ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

    ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

    ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts