More

    ಹಕ್ಕಿಜ್ವರ.. ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ; ಕೇರಳದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ

    ಬೆಂಗಳೂರು: ನೆರೆಯ ಕೇರಳದಲ್ಲಿ ಹಕ್ಕಿಜ್ವರ ತೀವ್ರವಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸಲಾಗಿದೆ. ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಕೋಳಿಗಳ ಸಾಗಾಟ ನಿರ್ಬಂಧ ಮತ್ತು ಕರ್ನಾಟಕದಿಂದ ಕೇರಳಕ್ಕೆ ಕೋಳಿಗಳನ್ನು ಕೊಂಡೊಯ್ದು ವಾಪಸ್ ಬರುವ ವಾಹನಗಳನ್ನು ಗಡಿಯಲ್ಲೇ ತಡೆದು ಕೀಟನಾಶಕ ಸಿಂಪಡಿಸಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಡಳಿತ ನಿರ್ಧರಿಸಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ಪ್ರವಾಸಿತಾಣ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಗಡಿ ಚೆಕ್​ಪೋಸ್ಟ್​ಗಳಲ್ಲಿ ರಾಜ್ಯದಿಂದ ಕೇರಳಕ್ಕೆ ಕೋಳಿ ಮತ್ತು ಮೊಟ್ಟೆಗಳನ್ನು ಸಾಗಿಸá-ವ ಹಾಗೂ ಅಲ್ಲಿಂದ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಮೈಸೂರಿನ ಕುಕ್ಕರಹಳ್ಳಿಯಲ್ಲಿ ಕೆಲದಿನಗಳ ಹಿಂದೆ ಎರಡು ಹಕ್ಕಿಗಳು ಮೃತಪಟ್ಟಿದ್ದವು. ಅವುಗಳನ್ನು ಲ್ಯಾಬ್​ಗೆ ಕಳುಹಿಸಲಾಗಿತ್ತು. ವರದಿ ನೆಗೆಟಿವ್ ಬಂದಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹಕ್ಕಿಗಳಿರುವ ಪರಿಸರದಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲೂ ಹೈಅಲರ್ಟ್ ಆಗಿದ್ದು, ವಲಸೆ ಕೊಕ್ಕರೆಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಸದ್ಯ ರಂಗನತಿಟ್ಟು ಪಕ್ಷಿಧಾಮ ಮತ್ತು ಕೊಕ್ಕರೆ ಬೆಳ್ಳೂರಿನಲ್ಲಿ ಯಾವುದೇ ಪಕ್ಷಿಗೂ ರೋಗ ಗುಣಲಕ್ಷಣಗಳು ಕಂಡುಬಂದಿಲ್ಲ. ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್​ಪೋಸ್ಟ್ ಸ್ಥಾಪಿಸಲು ಕ್ರಮವಹಿಸಲಾಗಿದೆ. ರ್ಯಾಪಿಡ್ ರೆಸ್ಪಾನ್ಸ್ ತಂಡ ಕೂಡ ರಚಿಸಲಾಗಿದೆ.

    ಕಾಗೆಗಳ ಸಾವು: ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದ ಆರಂಗಡಿ ಎಂಬಲ್ಲಿ 6 ಕಾಗೆಗಳ ಕಳೇಬರ ಪತ್ತೆಯಾಗಿದ್ದು, ಅಂಗಾಂಗಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ವಾರದೊಳಗೆ ವರದಿ ಬರಲಿದ್ದು, ಹಕ್ಕಿಜ್ವರಕ್ಕೂ ಇದಕ್ಕೂ ಸಂಬಂಧವಿರುವ ಸಾಧ್ಯತೆ ಕಡಿಮೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ.

    ಕೇರಳದಲ್ಲಿ ಮುಂಜಾಗ್ರತೆ: ಕೊಟ್ಟಾಯಂ, ಆಲಪ್ಪುಳ ಜಿಲ್ಲೆಗಳಲ್ಲಿ ಹಕ್ಕಿಜ್ವರ ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲೂ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾದರೂ ಕೋಳಿ, ಬಾತುಕೋಳಿ, ಇನ್ನಿತರ ಹಕ್ಕಿಗಳು ಅಸಹಜ ರೀತಿಯಲ್ಲಿ ಮೃತಪಟ್ಟಿದ್ದರೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.

    ವಿಧವೆ ಮನೆಗೆ ನುಗ್ಗಿ ಇಬ್ಬರು ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅಟ್ಟಹಾಸ!

    ಬೀದಿನಾಯಿ ಕಚ್ಚಿದ್ರೂ ಸುಮ್ನಿರ್ಬೇಕಂತೆ; ಇಲ್ಲಂದ್ರೆ ಮೇನಕಾ ಗಾಂಧಿ ಫೋನ್​ ಮಾಡಿ ಬೆದರಿಕೆ ಹಾಕ್ತಾರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts