Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ. ಹಿಂದು ಧರ್ಮದಲ್ಲಿ ಈ ಜನ್ಮ ದಿನಾಂಕ ಮತ್ತು ಹುಟ್ಟಿದ ಗಳಿಗೆಯು ವ್ಯಕ್ತಿಯ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಹುಟ್ಟಿದ ದಿನ ಮತ್ತು ಗಳಿಗೆಯ ಆಧಾರದ ಮೇಲೆ ವ್ಯಕ್ತಿಯ ರಾಶಿ ಮತ್ತು ನಕ್ಷತ್ರಗಳನ್ನು ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಆತನ ಭವಿಷ್ಯದ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ಅಂದಹಾಗೆ ಒಬ್ಬ ವ್ಯಕ್ತಿಯ ಗುಣ, ನಡತೆ, ವರ್ತನೆ ಹಾಗೂ ಆತನ ಆಗು ಹೋಗುಗಳ ಹಿಂದೆ ಜನ್ಮ ನಕ್ಷತ್ರಗಳು ಕಾರಣವಾಗಿರುತ್ತದೆ. ಜನ್ಮ ನಕ್ಷತ್ರದ ಪ್ರಕಾರವಾಗಿ ಜೀವನದಲ್ಲಿ ಏನು ನಡೆಯಬೇಕೋ ಅದು ನಡದೇ ನಡೆಯುತ್ತದೆ ಎಂದು ಹಿರಿಯರು ಹೇಳುತ್ತಿರುತ್ತಾರೆ. ನಿಮ್ಮ ಜನ್ಮ ನಕ್ಷತ್ರದ ಪ್ರಕಾರ ನಿಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿದುಕೊಳ್ಳಬಹುದು. ಈ ಜನ್ಮ ನಕ್ಷತ್ರಗಳು ಪ್ರಭಾವ ಒಂದೇ ರೀತಿ ಇರುವುದಿಲ್ಲ. ಗ್ರಹಗಳ ಚಲನೆಯಿಂದಾಗಿ ಅವುಗಳ ಪ್ರಭಾವವೂ ಕೂಡ ಬದಲಾಗುತ್ತಿರುತ್ತದೆ. ಒಂದು ಸಮಯದಲ್ಲಿ ನೋವು ಅನುಭವಿಸಿದ್ದರೆ, ಇನ್ನೊಂದು ಸಮಯದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುತ್ತೀರಿ.
ಹೀಗೆ ಕೆಲವು ನಕ್ಷತ್ರಗಳಲ್ಲಿ ಹುಟ್ಟಿದವರು ಕೋಟೇಶ್ವರ ಯೋಗದಿಂದ ಜನಿಸುತ್ತಾರೆ. ಅವರು ತಮ್ಮ ಇಡೀ ಜೀವನವನ್ನು ಅಪಾರ ಸಂಪತ್ತು ಮತ್ತು ಸಮೃದ್ಧಿಯೊಂದಿಗೆ ಬದುಕುತ್ತಾರೆ. ಆ ನಕ್ಷತ್ರಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
ಉತ್ತರ ನಕ್ಷತ್ರ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ನಕ್ಷತ್ರದಲ್ಲಿ ಜನಿಸಿದವರು ಹುಟ್ಟಿನಿಂದಲೇ ಆರ್ಥಿಕವಾಗಿ ಆಶೀರ್ವದಿಸಿರುತ್ತಾರೆ. ಅವರ ಮೊದಲ ಕೆಲಸವು ಹೆಚ್ಚಿನ ಸಂಬಳದೊಂದಿಗೆ ಇರುತ್ತದೆ ಮತ್ತು ಕೆಲಸದ ಸ್ಥಳದಲ್ಲಿ ತಮ್ಮ ಕೌಶಲ್ಯಗಳನ್ನು ಸಾಬೀತುಪಡಿಸುತ್ತಾರೆ. ಚಿಕ್ಕ ವಯಸ್ಸಿನಲ್ಲೇ ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತಾರೆ ಮತ್ತು 40 ವರ್ಷಕ್ಕೂ ಮುಂಚೆಯೇ ಮಿಲಿಯನೇರ್ ಆಗುತ್ತಾರೆ.
ಇದನ್ನೂ ಓದಿ: ಕೈದಿಗೆ 18 ಸಾವಿರ ರೂ, ಪದವಿ ಪಡೆದವರಿಗೆ 10 ಸಾವಿರ ರೂ: ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಅಸಮಾಧಾನ
ಕೃತಿಕಾ ನಕ್ಷತ್ರ
ಕೃತಿಕಾ ನಕ್ಷತ್ರದಲ್ಲಿ ಜನಿಸಿದವರು ಹಣದ ದೇವರಾದ ಕುಬೇರನ ಸಂಪೂರ್ಣ ಆಶೀರ್ವಾದದಿಂದ ಜನಿಸುತ್ತಾರೆ. ಆದ್ದರಿಂದ ಅವರ ಜೀವನದಲ್ಲಿ ಹಣದ ಕೊರತೆಯೇ ಇರುವುದಿಲ್ಲ. ಈ ನಕ್ಷತ್ರದವರು ತಮ್ಮ ಜೀವನದಲ್ಲಿ ನಿರಂತರ ಪ್ರಗತಿಯನ್ನು ಕಾಣುತ್ತಾರೆ ಮತ್ತು ಕನಿಷ್ಠ ಪ್ರಯತ್ನದಿಂದ ತಮ್ಮ ಆರ್ಥಿಕ ಸ್ಥಿತಿಯಲ್ಲಿ ಉತ್ತುಂಗವನ್ನು ತಲುಪುತ್ತಾರೆ. ತಮ್ಮ ಜೀವನ ಸಂಗಾತಿಗೆ ಎಲ್ಲ ರೀತಿಯಲ್ಲೂ ಆರಾಮದಾಯಕ ಜೀವನವನ್ನು ಒದಗಿಸುತ್ತಾರೆ.
ಮಾಘ ನಕ್ಷತ್ರ
ಮಾಘ ನಕ್ಷತ್ರದಲ್ಲಿ ಜನಿಸಿದವರು ಕೋಟೇಶ್ವರ ಯೋಗದಿಂದ ಜನಿಸುತ್ತಾರೆ. ಬಾಲ್ಯದಿಂದ ವೃದ್ಧಾಪ್ಯದವರೆಗೆ ಐಷಾರಾಮಿ ಜೀವನ ನಡೆಸುವ ಭಾಗ್ಯ ಇವರಿಗೆ ಲಭಿಸುತ್ತದೆ. ಯಾವುದೇ ವ್ಯವಹಾರದಲ್ಲಿ ತೊಡಗಿಸಿಕೊಂಡರೂ ತ್ವರಿತವಾಗಿ ಹಣವನ್ನು ಗಳಿಸುವ ಸಾಮರ್ಥ್ಯವನ್ನು ಈ ನಕ್ಷತ್ರದವರು ಹೊಂದಿರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.
2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money
2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life