

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ. ಹಿಂದು ಧರ್ಮದಲ್ಲಿ ಈ ಜನ್ಮ ದಿನಾಂಕ ಮತ್ತು ಹುಟ್ಟಿದ ಗಳಿಗೆಯು ವ್ಯಕ್ತಿಯ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಹುಟ್ಟಿದ ದಿನ ಮತ್ತು ಗಳಿಗೆಯ ಆಧಾರದ ಮೇಲೆ ವ್ಯಕ್ತಿಯ ರಾಶಿ ಮತ್ತು ನಕ್ಷತ್ರಗಳನ್ನು ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಆತನ ಭವಿಷ್ಯದ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ಅಂದಹಾಗೆ ಒಬ್ಬ ವ್ಯಕ್ತಿಯ ಗುಣ, ನಡತೆ, ವರ್ತನೆ ಹಾಗೂ ಆತನ ಆಗು ಹೋಗುಗಳ ಹಿಂದೆ ಜನ್ಮ ನಕ್ಷತ್ರಗಳು ಕಾರಣವಾಗಿರುತ್ತದೆ. ಜನ್ಮ ನಕ್ಷತ್ರದ ಪ್ರಕಾರವಾಗಿ ಜೀವನದಲ್ಲಿ ಏನು ನಡೆಯಬೇಕೋ ಅದು ನಡದೇ ನಡೆಯುತ್ತದೆ ಎಂದು ಹಿರಿಯರು ಹೇಳುತ್ತಿರುತ್ತಾರೆ. ನಿಮ್ಮ ಜನ್ಮ ನಕ್ಷತ್ರದ ಪ್ರಕಾರ ನಿಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿದುಕೊಳ್ಳಬಹುದು. ಈ ಜನ್ಮ ನಕ್ಷತ್ರಗಳು ಪ್ರಭಾವ ಒಂದೇ ರೀತಿ ಇರುವುದಿಲ್ಲ. ಗ್ರಹಗಳ ಚಲನೆಯಿಂದಾಗಿ ಅವುಗಳ ಪ್ರಭಾವವೂ ಕೂಡ ಬದಲಾಗುತ್ತಿರುತ್ತದೆ. ಒಂದು ಸಮಯದಲ್ಲಿ ನೋವು ಅನುಭವಿಸಿದ್ದರೆ, ಇನ್ನೊಂದು ಸಮಯದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುತ್ತೀರಿ.
ಅದೇ ರೀತಿ ಕೆಲವು ನಕ್ಷತ್ರಗಳಲ್ಲಿ ಜನಿಸಿದ ಮಹಿಳೆಯರನ್ನು ಜ್ಯೋತಿಷ್ಯದ ಪ್ರಕಾರ ಹಣದ ದೇವತೆ ಎಂದು ಪರಿಗಣಿಸಲಾದ ಲಕ್ಷ್ಮಿ ದೇವಿಯ ಪುನರ್ಜನ್ಮವೆಂದು ಪರಿಗಣಿಸಲಾಗುತ್ತದೆ. ಅವರಿಗೆ ಜೀವನದುದ್ದಕ್ಕೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದ ಮಹಿಳೆಯರು ಯಾವ ನಕ್ಷತ್ರಗಳಲ್ಲಿ ಜನಿಸುತ್ತಾರೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
ಲಕ್ಷ್ಮಿ ದೇವಿಗೆ ಇಷ್ಟವಾದ ನಕ್ಷತ್ರಗಳಲ್ಲಿ ರೋಹಿಣಿ ನಕ್ಷತ್ರ ಮೊದಲ ಸ್ಥಾನದಲ್ಲಿದೆ. ಈ ನಕ್ಷತ್ರದಲ್ಲಿ ಜನಿಸಿದ ಮಹಿಳೆಯರು ಹಣದ ಅಧಿಪತಿಯಾದ ಲಕ್ಷ್ಮಿ ದೇವಿಯ ಸಂಪೂರ್ಣ ಆಶೀರ್ವಾದ ಪಡೆಯುತ್ತಾರೆ. ತಮ್ಮ ಜೀವನದಲ್ಲಿ ಎಂದಿಗೂ ಆರ್ಥಿಕ ಸಮಸ್ಯೆಗಳನ್ನು ಎದುರಿಸುವುದಿಲ್ಲ. ಅವರು ಎಲ್ಲ ಸಂಪತ್ತನ್ನು ಗಳಿಸುತ್ತಾರೆ ಮತ್ತು ಐಷಾರಾಮಿ ಜೀವನವನ್ನು ಆನಂದಿಸುತ್ತಾರೆ.
ಈ ನಕ್ಷತ್ರದಲ್ಲಿ ಜನಿಸಿದ ಮಹಿಳೆಯರು ಸ್ವಾಭಾವಿಕವಾಗಿಯೇ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಹೊಂದಿರುತ್ತಾರೆ. ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವವರು ಲಕ್ಷ್ಮಿ ದೇವಿಗೆ ತುಂಬಾ ಪ್ರಿಯರಾಗಿರುತ್ತಾರೆ. ಅವರಿಗೆ ಲಕ್ಷ್ಮಿಯ ಆಶೀರ್ವಾದವು ಸಂಪೂರ್ಣವಾಗಿರುತ್ತದೆ. ಅವರ ಉತ್ತಮ ಗುಣಗಳು, ಲಕ್ಷ್ಮಿಯ ಆಶೀರ್ವಾದದೊಂದಿಗೆ ಸೇರಿ, ಅವರು ಆರ್ಥಿಕವಾಗಿ ವೇಗವಾಗಿ ಬೆಳೆಯಲು ಅನುವು ಮಾಡಿಕೊಡುತ್ತದೆ.
ಈ ನಕ್ಷತ್ರದಲ್ಲಿ ಜನಿಸಿದ ಮಹಿಳೆಯರು ಸ್ವಾಭಾವಿಕವಾಗಿ ಪ್ರಾಮಾಣಿಕರಾಗಿರುತ್ತಾರೆ. ಇವರು ನ್ಯಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಲಕ್ಷ್ಮಿ ದೇವಿಯ ಆಶೀರ್ವಾದದಿಂದ ಕಠಿಣ ಪರಿಶ್ರಮದ ಮೂಲಕ ಉನ್ನತ ಸ್ಥಾನಕ್ಕೇರುತ್ತಾರೆ. ಅವರ ಆರ್ಥಿಕ ಪ್ರಗತಿ ಊಹಿಸಿದ್ದಕ್ಕಿಂತ ವೇಗವಾಗಿರುತ್ತದೆ. ಯಾವುದೇ ಕ್ಷೇತ್ರದಲ್ಲಿದ್ದರೂ ಅವರ ಬೆಳವಣಿಗೆ ಇತರರನ್ನು ಅಚ್ಚರಿಗೊಳಿಸುವ ಹಂತಕ್ಕೆ ತಲುಪುತ್ತದೆ. ಈ ನಕ್ಷತ್ರದಲ್ಲಿ ಜನಿಸಿದವರು ತಮ್ಮ ಜೀವನದುದ್ದಕ್ಕೂ ಸಮೃದ್ಧಿಯಾಗಿರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.