ಬರ್ತಡೇ ಕೇಕ್​ ಸೇವಿಸಿ 10 ವರ್ಷದ ಬಾಲಕಿ ದಾರುಣ ಸಾವು

cake
Published on

ಚಂಢೀಗಡ: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್​ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಪಂಜಾಬ್​ನ ಪಟಿಯಾಲದಲ್ಲಿ ನಡೆದಿದೆ.

ಮಾರ್ಚ್ 24 ರಂದು ತಮ್ಮ ಮಗಳ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಪೋಷಕರು ಪಂಜಾಬ್​ನ ಪಟಿಯಾಲದಲ್ಲಿರುವ ಬೇಕರಿಯೊಂದರಲ್ಲಿ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾರೆ. ಹುಟ್ಟುಹಬ್ಬದ ಕೇಕ್ ತಿಂದ ಸೇವಿಸಿದ ಕುಟುಂಬಸ್ಥರಿಗೆ ಹಾಗೂ ಬಾಲಕಿಕೆ ವಾಕರಿಕೆ ಹಾಗೂ ವಾಂತಿಯಾಗಿದೆ ಇದನ್ನು ಅರಿತ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ 10 ವರ್ಷದ ಬಾಲಕಿ ಮಾನ್ವಿ ಆಸ್ಪತ್ರೆಗೆ ತಲುಪಿದ ನಂತರ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಫುಡ್​ ಪಾಯ್ಸನ್​ ನಿಂದಾಗಿ ಈ ದಾರುಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್​ 273,304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಥಳೀಯ ವರದಿಗಳು ಹೇಳಿವೆ.

ಬೇಕರಿಯ ಹೆಸರು ಮತ್ತು ಬೇಕರಿ ಇರುವ ವಿವರಗಳು ಇನ್ನೂ ತಿಳಿದುಬಂದಿಲ್ಲ. ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net