ನಟ ದರ್ಶನ್ ಅಂಡ್ ಗ್ಯಾಂಗ್‌ಗಾಗಿ ಸೆಲ್​​ಗೆ ಬಂತು ಬಿಸಿ ಬಿಸಿ ಬಿರಿಯಾನಿ ಊಟ

darshan (1)
Published on

ಬೆಂಗಳೂರು:  ಸ್ಯಾಂಡಲ್​​ವುಡ್​ ನಟ  ದರ್ಶನ್​ ಸೇರಿದಂತೆ 13 ಮಂದಿ ಯುವಕನ ಬರ್ಬರ ಕೊಲೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಅರೆಸ್ಟ್​​ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೋರ್ಟ್ ಆದೇಶದ ಬಳಿಕ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಅನ್ನಪೂರ್ಣೇಶ್ವರಿನಗರ ಠಾಣೆಗೆ ಕರೆತಂದಿದ್ದಾರೆ.

ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ & ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಅಂಡ್ ಟೀಂ ಅನ್ನು ಇಂದು ಮಧ್ಯಾಹ್ನ ಬಂಧಿಸಲಾಯಿತು. ಮೆಡಿಕಲ್ ಚೆಕಪ್ ಮಾಡಿದ ಬಳಿಕ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಮುಂದೆ ದರ್ಶನ್ ಅಂಡ್ ಗ್ಯಾಂಗ್ ಕೈ ಕಟ್ಟಿ ನಿಂತಿದ್ದು, ಜಡ್ಜ್ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ದರ್ಶನ್ ಸೇರಿ 13ಆರೋಪಿಗಳು ಇಂದಿನಿಂದ 6 ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಬೇಕು. ವಿಚಾರಣೆಯ ಹಿನ್ನೆಲೆಯಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬಿರಿಯಾನಿ ಊಟ ತರಿಸಿಕೊಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net