More

    ಬಜೆಟ್‌ನಲ್ಲಿ ಬಿಸಿಯೂಟ ತಯಾರಕರ ಕಡೆಗಣನೆ

    ದಾವಣಗೆರೆ : ಹೊಳೆ ದಾಟಿದ ಮೇಲೆ ಅಂಬಿಗನನ್ನು ಮರೆತಂತೆ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬಿಸಿಯೂಟ ತಯಾರಕರನ್ನು ಕಡೆಗಣಿಸಿದೆ ಎಂದು ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.
     ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ 1.21 ಲಕ್ಷ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸದೆ ಸರ್ಕಾರ ವಂಚಿಸಿದೆ. ವಿಧಾನಸಭೆ ಚುನಾವಣೆಗೆ ಮೊದಲು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಲ್ಲಿ ಆರನೇ ಗ್ಯಾರಂಟಿಯಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದರು. ಬಿಸಿಯೂಟ ತಯಾರಕರಿಗೂ ಮಾಸಿಕ 6 ಸಾವಿರ ರೂ. ವೇತನ ಕೊಡುವುದಾಗಿ ಘೋಷಿಸಿದ್ದರು ಎಂದು ನೆನಪಿಸಿದ್ದಾರೆ.
     ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ. ದುಡಿಯುವ ಮಹಿಳೆಯರನ್ನು ಸುಳ್ಳು ಹೇಳಿ ವಂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಫೆಡರೇಶನ್ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ಖಜಾಂಚಿ ರುದ್ರಮ್ಮ ಬೆಳಗೆರೆ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts