More

    ಬಿಸಿಯೂಟ ನೌಕರರ ಮೇಲೆ ಸರ್ಕಾರದ ಗದಾಪ್ರಹಾರ

    ದೇವದುರ್ಗ: ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಪ್ರಹಾರ ನಡೆಸಿ ಬಂಧಿಸಿರುವುದನ್ನು ಖಂಡಿಸಿ ಮಿನಿವಿಧಾನಸೌಧ ಮುಂದೆ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಗುರುವಾರ ಪ್ರತಿಭಟನೆ ನಡೆಸಿತು.

    ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1.23 ಲಕ್ಷ ಮಹಿಳೆಯರು ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ಐದು ದಿನಗಳಿಂದ ಹೋರಾಟ ನಡೆಸುತ್ತಿದ್ದವರ ಬೇಡಿಕೆ ಈಡೇರಿಸುವ ಬದಲು ಲಾಠಿಪ್ರಹಾರ ನಡೆಸಿ ಬಂಧನ ಮಾಡಿರುವುದು ಖಂಡನೀಯ. ನೌಕರರ ಮೇಲೆ ಸರ್ಕಾರ ಗಧಾಪ್ರಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಂಧನ ಮಾಡಿರುವ ನೌಕರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ ಹಾಗೂ ನಿವೃತ್ತಿ ನಂತರ ಇಡಗಂಟು ನೀಡಬೇಕು. ಕೆಲಸದ ಸಮಯದಲ್ಲಿ ಅನಾಹುತ ಸಂಭವಿಸಿದರೆ. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದು ಸೇರಿ ಇತರ ಬೇಡಿಕೆ ಈಡೇರಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರೇಡ್-2 ತಹಸೀಲ್ದಾರ್ ಗೋವಿಂದ್‌ಗೆ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts