More

    26ಕ್ಕೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ

    ಚಿಕ್ಕಮಗಳೂರು: ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ತಯಾರಕ ಕಾರ್ಯಕರ್ತೆಯರ ಫೆಡರೇಷನ್‌ನಿಂದ ಜು.26ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ಎಸ್.ವಿಜಯಕುಮಾರ್ ತಿಳಿಸಿದರು.

    ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುವ ಮೊದಲು ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಬದುಕು ದುಸ್ತರವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಬಿಸಿಯೂಟ ಕಾರ್ಯಕರ್ತೆಯರಿಗೆ 6 ಸಾವಿರ ರೂ.ಗೆ ವೇತನ ಹೆಚ್ಚಿಸುವುದಾಗಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆದಿದೆ. ನೀಡಿದ ಭರವಸೆಯಂತೆ ವೇತನ ಹೆಚ್ಚಿಸಬೇಕಿತ್ತು. ಆದರೆ ಕಾರ್ಯಕರ್ತೆಯರನ್ನು ವಂಚಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಆರಂಭದಲ್ಲಿ ತಿಂಗಳಿಗೆ ಕೇವಲ 300 ರೂ. ಸಂಭಾವನೆಗೆ ಕಾರ್ಯಕರ್ತರು ಸೇರಿದ್ದರು. ಅನೇಕ ಹೋರಾಟಗಳ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಭಾವನೆಯನ್ನು ಒಂದು ಸಾವಿರ ರೂ.ಗೆ ಏರಿಕೆ ಮಾಡಿದರು. ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40ರಷ್ಟು ಪಾವತಿ ಮಾಡುವುದಾಗಿ ಹೇಳಿತ್ತು. ಆದರೆ ಕೇಂದ್ರ ಸರ್ಕಾರ ಇದುವರೆಗೂ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ದೂರಿದರು.
    20 ವರ್ಷಗಳಿಂದ ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ಈಗ 3,700 ರೂ. ನೀಡಲಾಗುತ್ತಿದೆ. ಒಂದು ವೇಳೆ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಏಕಾಏಕಿಯಾಗಿ ಕೆಲಸದಿಂದ ಮನೆಗೆ ಕಳುಹಿಸುತ್ತಾರೆ. ಮರಣ ಹೊಂದಿದರೆ ಶವಸಂಸ್ಕಾರಕ್ಕೂ ಸಹ ಬಿಡಿಗಾಸು ನೀಡದೆ ಕುಟುಂಬದವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪಿಎಫ್, ಇಎಸ್‌ಐ ಹಾಗೂ ಉದ್ಯೋಗ ಭದ್ರತೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
    ಸಂಘಟನೆಯ ಪದಾಧಿಕಾರಿಗಳಾದ ಇಂದುಮತಿ, ಲತಾ, ಪುಷ್ಪಾ, ಚಂದ್ರಮ್ಮ, ಸ್ವಪ್ನಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts