More

    ಹಿಂದು ರಾಷ್ಟ್ರ ಕಟ್ಟುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರಿಂದ ದೇಶಕ್ಕೆ ಉಳಿಗಾಲವಿಲ್ಲ

    ಬಂಗಾರಪೇಟೆ: ಭಾರತವನ್ನು ಜಾತಿ, ಧರ್ಮದ ಆಧಾರದ ಮೇಲೆ ಹಿಂದು ರಾಷ್ಟ್ರ ಕಟ್ಟುತ್ತೇವೆ ಎಂದು ಹೇಳುತ್ತಾ ಹೊರಟಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳನ್ನು ಕಿತ್ತೊಗೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹೇಳಿದರು.

    ಬಂಗಾರಪೇಟೆ ತಾಲೂಕಿನ ಕೆಸರನಹಳ್ಳಿ ಮತ್ತು ಮಾಗೊಂದಿ ಗ್ರಾಮ ಪಂಚಾಯಿತಿಗಳಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು 7.50 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ಕಳೆದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಿಂದು ದೇವರ ಫೋಟೋ ಮೇಲೆ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡು ಹಣ ಹಂಚಿದರು. ಇವರಿಂದ ಹಿಂದು ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆಯೇ? ಹಿಂದು ರಾಷ್ಟ್ರ ನಿರ್ಮಾಣದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈಗ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಇಂತಹ ಕೆಟ್ಟ ಸರ್ಕಾರವನ್ನು ಕಿತ್ತು ಹಾಕಲು ಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದರು.

    ಪ್ರಧಾನಿ ಮೋದಿ ಯಾರನ್ನೂ ಪರಿಗಣಿಸುವುದಿಲ್ಲ, ಯಾವುದೇ ಸಾಧನೆ ಮಾಡದಿದ್ದರೂ ಮಾಧ್ಯಮದಲ್ಲಿ ಅವರನ್ನು ವೈವಭವಿಸುವ ಕೆಲಸ ಮಾಡಲಾಗುತ್ತಿದೆ. ದೇಶ ಗಂಡಾಂತರದಲ್ಲಿದೆ. ಎಲ್ಲ ಸಮಾಜವನ್ನು ಒಂದುಗೂಡಿಸಿಕೊಂಡು ಆಡಳಿತ ನಡೆಸಿದರೆ ದೇಶ ಉಳಿಯುತ್ತದೆ. ಜಾತಿ-ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿರುವ ಬಿಜೆಪಿ ನಾಯಕರಿಂದ ದೇಶಕ್ಕೆ ಉಳಿಗಾಲವಿಲ್ಲ. ಬಿಜೆಪಿ ಸರ್ಕಾರವನ್ನು ಬೇರು ಸಮೇತ ಕಿತ್ತು ಹಾಕಬೇಕು. ಶಾಸಕ ಎಸ್.ಎನ್ ನಾರಾಯಣಸ್ವಾಮಿಗೆ ಬಲಗೈನಂತಿದ್ದವರು ಪಕ್ಷ ಬಿಟ್ಟು ಹೋಗಿದ್ದಾರೆ. ಇದರಿಂದ ಶಾಸಕರು ಚಿಂತೆ ಪಡಬೇಕಿಲ್ಲ ಅವರ ಸ್ಥಾನವನ್ನು ನಾನು ತುಂಬುವೆ ಎಂದು ಭರವಸೆ ನೀಡಿದರು.

    ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಚಲದಿಂದ ಅಧಿಕಾರವನ್ನು ಹಾಗೂ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡು ಹಣದ ಹೊಳೆಯನ್ನೇ ಹರಿಸಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಸತ್ಯ ಅಸತ್ಯದ ಮಧ್ಯೆ ಧರ್ಮ ಅಧರ್ಮದ ನಡುವೆ ಚುನಾವಣೆ ನಡೆಯಿತು. ಕೊನೆಗೆ ನ್ಯಾಯ ಗೆದ್ದಿದೆ, ಸತ್ಯ ಉಳಿದಿದೆ ಧರ್ಮ ತಲೆ ಎತ್ತಿದೆ ಎಂದರು.

    ಮಾಗೊಂದಿ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಉಪಾಧ್ಯಕ್ಷ ಕುಪೇಂದ್ರ, ಕೆಸರನಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಗಂಗಾಧರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಕೆ.ನಾರಾಯಣಸ್ವಾಮಿ, ಬೂದಿಕೋಟೆ ಬ್ಲಾಕ್ ಅಧ್ಯಕ್ಷ ನಾಗರಾಜ್, ತಾಪಂ ಮಾಜಿ ಅಧ್ಯಕ್ಷ ಮಹಾದೇವ್, ಮುಖಂಡರಾದ ಗೋಪಾಲಗೌಡ, ಚಂಗಾರೆಡ್ಡಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts