More

    ಬಿಜೆಪಿ ಪ್ರಮುಖರಿಂದ ಶಾಸಕ ಅಬ್ಬಯ್ಯಗೆ ಮನವಿ

    ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಂದಿರುವ ಅನುದಾನ, ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಹಾಗೂ ಕೈಗೊಂಡ ಅಭಿವೃದ್ಧಿ ಕಾರ್ಯಗಳ ವಿವರ ನೀಡುವಂತೆ ಆಗ್ರಹಿಸಿ ಕ್ಷೇತ್ರದ ಬಿಜೆಪಿ ಮುಖಂಡರು ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ಬಿಜೆಪಿ ರಾಜ್ಯಾದ್ಯಂತ ‘ಮತದಾರರಿಗೆ ಉತ್ತರಿಸಿ ಅಭಿಯಾನ’ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಗೋಪನಕೊಪ್ಪ ಜೆ.ಕೆ. ಸ್ಕೂಲ್ ಬಳಿಯ ಶಾಸಕ ಪ್ರಸಾದ ಅಬ್ಬಯ್ಯ ಅವರ ಗೃಹಕಚೇರಿಗೆ ಶನಿವಾರ ಭೇಟಿ ನೀಡಿ ಮನವಿ ಸಲ್ಲಿಸಿದ ಬಿಜೆಪಿ ಪ್ರಮುಖರು, ಪೂರ್ವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಹೀಗಾಗಿ, ಇದುವರೆಗಿನ ಕಾರ್ಯಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದರು.

    ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಅನುಷ್ಠಾನಗೊಳಿಸಲು ಕೈಗೊಂಡಿರುವ ಯೋಜನೆಗಳು, ಕ್ಷೇತ್ರದ ರೈತರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಎಷ್ಟು ?, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಹೊರತುಪಡಿಸಿ ರಾಜ್ಯ ಸರ್ಕಾರ ಎಷ್ಟು ಅಕ್ಕಿ ನೀಡಯುತ್ತಿದೆ ? ಸೇರಿದಂತೆ ವಿವಿಧ ಯೋಜನೆಗಳ ಉತ್ತರ ನೀಡುವಂತೆ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಹು-ಧಾ ಪೂರ್ವ ಕ್ಷೇತ್ರಕ್ಕೆ ಬಿಜೆಪಿ ಕಳೆದ ಅವಧಿಯಲ್ಲಿ ಕೇವಲ 40 ಕೋಟಿ ರೂ. ನೀಡಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಒಂದು ವರ್ಷ ಆಗಿಲ್ಲ, ಆಗಲೇ 60 ಕೋಟಿ ರೂ. ನೀಡಿದೆ. ಕ್ಷೇತ್ರದಾದ್ಯಂತ ಒಳಚರಂಡಿ ಯೋಜನೆ ಕೈಗೊಳ್ಳಲು 80 ಕೋಟಿ ರೂ. ಅನುದಾನ ನೀಡಲು ಮುಖ್ಯಮಂತ್ರಿ ಅವರು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.’

    ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕ ಅಶೋಕ ಕಾಟವೆ, ಪ್ರಭು ನವಲಗುಂದಮಠ, ರಂಗಾ ಬದ್ದಿ, ದತ್ತಮೂರ್ತಿ ಕುಲಕರ್ಣಿ, ಚಂದ್ರಶೇಖರ ಗೋಕಾಕ, ರಾಜು ಕೋರ್ಯಾನಮಠ, ಲಕ್ಷ್ಮೀಕಾಂತ ಘೋಡಕೆ, ಸತೀಶ ಶೇಜವಾಡಕರ, ಸಂತೋಷ ಅರಕೇರಿ, ರಾಜು ಜರತಾರಘರ, ಬಸವರಾಜ ಅಮ್ಮಿನಬಾವಿ, ಜಗದೀಶ ಬುಳ್ಳಣ್ಣವರ, ಶಿವಯ್ಯ ಹಿರೇಮಠ, ಅನುಪ ಬಿಜವಾಡ ಹಾಗೂ ಇತರರು ಹಾಜರಿದ್ದರು.

    ಬಾಕ್ಸ್

    ದಾಖಲೆ ಕೊಡಲಿ

    ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಬಿಡುಗಡೆಗೊಂಡ ಅನುದಾನದ ಬಗ್ಗೆ ಲಿಖಿತ ದಾಖಲೆಗಳನ್ನು ಕೊಡಲಿ ಎಂದು ಬಿಜೆಪಿ ಮಹಾನಗರ ಜಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹೇಳಿದರು.

    ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಮಹಾನಗರದಲ್ಲಿ ಬಿಜೆಪಿ ಆಡಳಿತ ಇದೆ. ಪಾಲಿಕೆ ಅನುದಾನದಡಿಯೂ ಪೂರ್ವ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ನಡೆದಿವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts