ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

Mallikarjun BJP
Published on

ಶಿವಮೊಗ್ಗ: ದೇಶಾದ್ಯಂತ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಿದ್ದು, ಈ ಸಮಾರಂಭಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಹಠಾತ್ ಸಾವಿಗೆ ಒಳಗಾಗಿದ್ದಾನೆ. ಸೊರಬ ತಾಲೂಕು ಚಿಮನೂರು ಗ್ರಾಮದ ಸಿ.ಬಿ. ಮಲ್ಲಿಕಾರ್ಜುನ್ ಕುಸಿದು ಬಿದ್ದು ಸಾವಿಗೀಡಾದ ವ್ಯಕ್ತಿ.

ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲೇ ಅಸ್ವಸ್ಥಗೊಂಡ ಮಲ್ಲಿಕಾರ್ಜುನ್ ನೀರನ್ನು ಕೇಳಿದ್ದಾರೆ. ಆದರೆ ಅವರಿಗೆ ಸಕಾಲದಲ್ಲಿ ಕುಡಿಯಲು‌ ನೀರು ಸಿಕ್ಕಿಲ್ಲ ಎನ್ನಲಾಗಿದೆ. ನಂತರ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಮಲ್ಲಿಕಾರ್ಜುನ್ ಸ್ಥಳದಲ್ಲೇ ಸಾವಿಗೀಡಾದರು. ಇವರು ಕಳೆದ 30 ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡು ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net