More

    ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

    ರಾಣೆಬೆನ್ನೂರ: ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕು. ಬರಪೀಡಿತ ಪ್ರದೇಶದ ರೈತರಿಗೆ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ನಗರದ ಪೋಸ್ಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
    ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಹಾಗೂ ರೈತ ವಿರೋಧಿ ಆಡಳಿತ ನಡೆಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ನೇತೃತ್ವ ವಹಿಸಿದ್ದ ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಆಡಳಿತದಲ್ಲಿ ತೊಡಗಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಈವರೆಗೂ ರೈತರ ನೆರವಿಗೆ ಧಾವಿಸಿಲ್ಲ.
    ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರವೇ ಘೋಷಣೆ ಮಾಡಿದ್ದರೂ ಈವರೆಗೂ ರೈತರ ಖಾತೆಗೆ ಪರಿಹಾರದ ಹಣ ಹಾಕಿಲ್ಲ. ಅಧಿಕಾರಿಗಳು ಕೂಡ ರೈತರ ಪರಿಸ್ಥಿತಿ ಅವಲೋಕನ ಮಾಡಿಲ್ಲ. ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರು ಹಾಯಿಸಲಾಗದೆ ಪರದಾಡುತ್ತಿದ್ದಾರೆ.
    ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಇಂತಹ ಪರಿಸ್ಥಿತಿ ನಿರ್ಮಾಣವಾದ ಕೇವಲ 24 ಗಂಟೆಗಳಲ್ಲಿ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು ಹಾಗೂ ರೈತರಿಗೆ ನಿರಂತರವಾಗಿ ಏಳು ತಾಸು ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಅ. 30ರಂದು ತೀವ್ರತರನಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
    ಪಕ್ಷದ ತಾಲೂಕು ಅಧ್ಯಕ್ಷ ಬಸವರಾಜ ಕೇಲಗಾರ, ಬಸವರಾಜ ಹುಲ್ಲತ್ತಿ, ದೀಪಕ ಹರಪನಹಳ್ಳಿ, ಡಾ. ಬಸವರಾಜ ಕೇಲಗಾರ, ಜಗದೀಶ ತೆಂಬದ, ಪರಮೇಶ ಗೂಳಣ್ಣನವರ, ಎ.ಬಿ. ಪಾಟೀಲ, ಕೊಟ್ರೇಶಪ್ಪ ಎಮ್ಮಿ, ಸುಭಾಸ ಸಿರಿಗೇರಿ, ಮಂಜುನಾಥ ಓಲೇಕಾರ, ಸಿದ್ದು ಚಿಕ್ಕಬಿದರಿ, ಅನಿಲ ಸಿದ್ದಾಳಿ, ಲಿಂಗನಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts