

ಗುರುಪುರ: ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಮಹಾಸಭೆ ಸೋಮವಾರ ನೀರುಮಾರ್ಗದಲ್ಲಿ ನಡೆಯಿತು.
ಶಾಸಕ ಡಾ.ಭರತ್ ಶೆಟ್ಟಿ ಪಕ್ಷದ ಸದಸ್ಯತ್ವ ಅಭಿಯಾನ ಮತ್ತು ಸಂಘಟನೆ ಕುರಿತು ಮಾತನಾಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಮಲಾಕ್ಷ, ಉಳಾಯಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಹರಿಕೇಶ ಶೆಟ್ಟಿ ನಡಿಗುತ್ತು, ಸಮಿತಿ ಸದಸ್ಯ ಗೋಕುಲದಾಸ ಶೆಟ್ಟಿ, ಮಂಡಲ ಕಾರ್ಯದರ್ಶಿ ಸಚಿನ್ ಅಡಪ, ಮಹಾಶಕ್ತಿ ಕೇಂದ್ರ ಸಮಿತಿ ಸದಸ್ಯರಾದ ಸುಧೀರ್ ಕಾಮತ್, ಕಿಶೋರ್ ಉಗ್ಗಕೋಡಿ, ಯಶವಂತಿ ಮಲ್ಲೂರು, ಜಿಲ್ಲಾ ಮಂಡಲ ಮೋರ್ಚಾ ಪದಾಧಿಕಾರಿಗಳು, ಗ್ರಾ.ಪಂ. ಸದಸ್ಯರು, ಗ್ರಾಮ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಬೂತ್ ಅಧ್ಯಕ್ಷ, ಕಾರ್ಯದರ್ಶಿ, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿದರು. ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಹನ್ ಆಳ್ವ ನಿರೂಪಿಸಿದರು.